Categories
ಚಿಕ್ಕಮಗಳೂರು

ಸಂಚಾರದ ವೇಳೆ ಬಸ್ಸಿನ 2 ಟೈರ್ ಕಳಚಿತು!

ಸಂಚಾರದ ವೇಳೆ ಬಸ್ಸಿನ 2 ಟೈರ್ ಕಳಚಿತು!

– ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನಲ್ಲಿ ಘಟನೆ
– ತಪ್ಪಿತು ದೊಡ್ಡ ದುರಂತ: ಹೇಗೆ ನಡೆಯಿತು ಘಟನೆ?

NAMMUR EXPRESS NEWS

ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದ ರೋಟರಿ ಸರ್ಕಲ್‌ನಲ್ಲಿ ಬುಧವಾರ ಬೆಳಗಿನ ಜಾವ ಬೆಂಗಳೂರಿನಿಂದ ಶೃಂಗೇರಿಗೆ ಬರುತ್ತಿದ್ದ ಖಾಸಗಿ ಬಸ್‌ನ ಹಿಂಬದಿಯ ಟೈಯರ್ ಕಳಚಿ ಹೋದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಘಟನೆಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ನಡೆದಿದ್ದು ಹೇಗೆ..?

ಮಂಗಳವಾರ ರಾತ್ರಿ ಖಾಸಗಿ ಬಸ್ಸು ಬೆಂಗಳೂರಿನಿಂದಹೊರಟು ಶೃಂಗೇರಿಗೆ ಬರುತ್ತಿದ್ದ ಸಂದರ್ಭದಲ್ಲಿ ಬೆಳಗ್ಗೆ 5:18 ರ ವೇಳೆಗೆ ರೋಟರಿ ಸರ್ಕಲ್ ಬಳಿ ಬರುತ್ತಿದ್ದಂತೆ ಹಿಂಬದಿಯ ಎರಡೂ ಚಕ್ರ ಕಳಚಿದೆ.ಚಕ್ರ ಕಳಚುವ ಸಮಯದಲ್ಲಿ ಮಳೆ ಬರುತ್ತಿದ್ದು ಬಸ್ಸು ನಿಧಾನವಾಗಿ ಸಂಚರಿಸುತ್ತಿತ್ತು. ಒಂದು ವೇಳೆ ಈ ಘಟನೆ ಘಾಟಿ ಪ್ರದೇಶದಲ್ಲಿ ಸಂಭವಿಸಿದ್ದರೆ ಮಹಾ ದುರಂತವೇ ನಡೆಯುವ ಸಾಧ್ಯತೆ ಇತ್ತು. ಪ್ರಯಾಣಿಕರು ಶೃಂಗೇರಿ ಶಾರದಾಂಬೆ ಕಾಪಾಡಿದಳು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

 

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.