ಸಿ.ಟಿ ರವಿ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರ
* ಅಭಿಮಾನಿ ಕಾರ್ಯಕರ್ತರಿಂದ ವಿಶೇಷ ಪೂಜೆ,ಶ್ರಮಾದಾನ
* ಸಿ.ಟಿ ರವಿ ಮನೆಗೆ ತೆರಳಿ ಶುಭಾಶಯ ತಿಳಿಸಿದ ಅಭಿಮಾನಿಗಳು
NAMMUR EXPRESS NEWS
ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ನಿಕಟ ಪೂರ್ವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಯವರ 58 ನೇ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು ಬಹಳ ಅದ್ದೂರಿಯಾಗಿ ಆಚರಿಸಿದರು.
ನಿನ್ನೆಯಿಂದಲೇ ದೇವಸ್ಥಾನಗಳಲ್ಲಿ ಪೂಜೆ,ಪ್ರಾರ್ಥನೆ ಸಲ್ಲಿಸುತ್ತಿರುವ ಕಾರ್ಯಕರ್ತರು ತಮ್ಮ ನಾಯಕನ ಶ್ರೇಯಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ದತ್ತಪೀಠದಲ್ಲಿ ಸಿ.ಟಿ ರವಿಯವರ ಹೆಸರಿನಲ್ಲಿ ವಿಶೇಷ ಪೂಜೆ ನಡೆಸಿದ ಜಿಲ್ಲಾಧ್ಯಕ್ಷ ಬಿ.ದೇವರಾಜ್ ಶೆಟ್ಟಿ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಹಾಗೂ ಅವರ ತಂಡ ನಂತರ ನಗರದ ಎಂ.ಜಿ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಪೂಜೆ,ಪ್ರಾರ್ಥನೆ ನಡೆಸಿ ಪ್ರಸಾದ ವಿನಿಯೋಗಿಸಿದರು. ಹಿರೇಮಗಳೂರಿನ ಶ್ರೀಕೋದಂಡರಾಮಸ್ವಾಮಿ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಸಿ.ಟಿ ರವಿ ಹಾಗೂ ಅವರ ಪತ್ನಿ ಪಲ್ಲವಿ ಸಿ.ಟಿ ರವಿ ಭಾಗಿಯಾಗಿ ಪೂಜೆ ಸಲ್ಲಿಸಿ ನಂತರ ಗಿಡ ನೆಡುವುದಕ್ಕೆ ಚಾಲನೆ ನೀಡಿದರು. ನಂತರ ಪ್ರಾಥಮಿಕ ಹಾಗೂ ಫ್ರೌಡಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮತ್ತು ಅಂಗನಾವಡಿ ಮಕ್ಕಳಿಗೆ ಉಲ್ಲನ್ ಟೋಪಿಗಳನ್ನು ವಿತರಿಸಿದರು.ಈ ಸಂರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ದೇವರಾಜ ಶೆಟ್ಟಿ,ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮುರಡಪ್ಪ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ,ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಸೇರಿದಂತೆ ಹಲವು ಪ್ರಮುಖರು ,ಅಭಿಮಾನಿಗಳು ಹಾಜರಿದ್ದರು.
ಬೆಂಗಳೂರಿನಲ್ಲೂ ಸಿ.ಟಿ ರವಿ ಅಭಿಮಾನಿಗಳು ದೊಡ್ಡ ಕಟೌಟ್ ನಿಲ್ಲಿಸಿ ತಮ್ಮ ನೆಚ್ಚಿನ ನಾಯಕನಿಗೆ ಜನ್ಮದಿನದ ಶುಭಾಶಯ ಕೋರಿದರು ಹಾಗೂ ರಾಜ್ಯ ಮತ್ತು ರಾಷ್ಟ್ರ ಬಿಜೆಪಿ ನಾಯಕರು ಶುಭಾಶಯ ತಿಳಿಸಿದ್ದಾರೆ.
