ಕಾಫಿನಾಡಲ್ಲಿ ಅದ್ದೂರಿ ಜಿಲ್ಲಾ ಯುವಜನೋತ್ಸವ ಕಾರ್ಯಕ್ರಮ..
– ಯುವ ಜನತೆಗಾಗಿ ಹಲವು ಸ್ಪರ್ಧೆಗಳ ಆಯೋಜನೆ
– ನೂರಾರು ವಿದ್ಯಾರ್ಥಿಗಳು ಭಾಗಿ
– ಹಲವು ಸಂಘ,ಸಂಸ್ಥೆಗಳ ಸಹಯೋಗದಲ್ಲಿ ಜರುಗಿದ ಕಾರ್ಯಕ್ರಮ
NAMMUR EXPRESS NEWS
ಚಿಕ್ಕಮಗಳೂರು: ಜಿಲ್ಲಾಡಳಿತ,ಜಿಲ್ಲಾ ಪಂಚಾಯ್ತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ,ಕನ್ನಡ ಜಾನಪದ ಪರಿಷತ್ ಚಿಕ್ಕಮಗಳೂರು ಹಾಗೂ ಜಿಲ್ಲೆಯ ವಿವಿಧ ಸಂಘ,ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾ ಯುವಜನೋತ್ಸವ – 2024-25 ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಯುವ ಜನತೆಗಾಗಿ ವಿಷಯಾಧಾರಿತ,ಸಾಂಸ್ಕೃತಿಕ ಹಾಗೂ ಜೀವನ ಕೌಶಲ್ಯ ವಿಷಯದಡಿಯಲ್ಲಿ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಿ ವಿಜೇತ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚಿಕ್ಕಮಗಳೂರು, ಜಿಲ್ಲಾ ವಿಜ್ಞಾನ ಕೇಂದ್ರ ಚಿಕ್ಕಮಗಳೂರು, ಸರ್ಕಾರಿ ಜೂನಿಯರ್ ಕಾಲೇಜು ಚಿಕ್ಕಮಗಳೂರು, ಶಾಂತಿ ನಿಕೇತನ ಚಿತ್ರಕಲಾ ವಿದ್ಯಾಲಯ ಚಿಕ್ಕಮಗಳೂರು ಇವರ ಸಹಕಾರವಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ ಶೃಂಗೇರಿ ತಾಲೂಕಿನ ಶ್ರೀಜೆಸಿಬಿಎಂ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿತು,ವಿದ್ಯಾರ್ಥಿಗಳಿಗೆ ಕಾಲೇಜುವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಕವಿತೆ ರಚನೆ – ದ್ವಿತೀಯ
ಜಾನಪದ ಗೀತೆ – ತೃತೀಯ
ಜಾನಪದ ನೃತ್ಯ – ತೃತೀಯ