ಮಾಜಿ ಸಚಿವ ರಮೇಶ್ ಕುಮಾರ್ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ..!!?
– ಹೈಕೋರ್ಟ್ ನಿರ್ದೇಶನದಂತೆ ಜಂಟಿ ಸರ್ವೇ ಆರಂಭ
– ಜಿನಗಲಕುಂಟೆ ಅರಣ್ಯ ಪ್ರದೇಶದಲ್ಲಿ 61.39 ಎಕರೆ ಒತ್ತುವರಿ ಆರೋಪ
NAMMUR EXPRESS NEWS
ಮಾಜಿ ಸಚಿವ ರಮೇಶ್ ಕುಮಾರ್ ಮೇಲೆ ಅರಣ್ಯ ಭೂಮಿ ಒತ್ತುವರಿ ಮಾಡಿದ ಆರೋಪವಿದ್ದು ಈ ಸಂಬಂಧ ಬುಧವಾರ ಜಂಟಿ ಸರ್ವೇ ಕಾರ್ಯ ಆರಂಭವಾಗಿದೆ. ಹೈಕೋರ್ಟ್ನ ನಿರ್ದೇಶನದಂತೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಜಿಗಲಕುಂಟೆ ಅರಣ್ಯ ಪ್ರದೇಶದ ಸರ್ವೇ ನಂಬರ್ 1 ಮತ್ತು 2 ರ ಜಮೀನಿನ ಜಂಟಿ ಸರ್ವೇ ಆರಂಭವಾಗಿದ್ದು, ಅರ್ಜಿದಾರ ಮಾಜಿ ಸಚಿವ ಕೆ.ಆರ್ ರಮೇಶ್ ಕುಮಾರ್ ಹಾಜರಿದ್ದು, ಜಿಲ್ಲಾಧಿಕಾರಿ ಎಂ.ಆರ್ ರವಿ ನೇತೃತ್ವದಲ್ಲಿ ನಡೆಯುತ್ತಿರುವ ಸರ್ವೇ ಕಾರ್ಯದಲ್ಲಿ ಡಿಸಿಎಫ್ ಸರಿನಾ ಸಿಕ್ಕಲಿಗಾರ್,ಡಿಡಿಎಲ್ಆರ್ ಸಂಜಯ್,ಉಪವಿಭಾಧಿಕಾರಿ ಡಾ.ಮೈತ್ರಿ,ಶ್ರೀನಿವಾಸಪುರ ತಹಶೀಲ್ದಾರ್ ಜಿ.ಎನ್ ಸುಧೀಂದ್ರ ಭಾಗವಹಿಸಿದ್ದಾರೆ. ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿ ರಮೇಶಕುಮಾರ್ 61.39 ಎಕರೆ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪವಿದೆ. ಸೂಕ್ತ ದಾಖಲೆಗಳೊಂದಿಗೆ ಸ್ಥಳಕ್ಕೆ ಹಾಜರಾಗುವಂತೆ ರಮೇಶ್ ಕುಮಾರ್ಗೆ ಸೂಚನೆ ನೀಡಲಾಗಿತ್ತು.ಆ ಪ್ರಕಾರ ರಮೇಶ್ ಕುಮಾರ್ ಸ್ಥಳಕ್ಕೆ ಬಂದು ದಾಖಲೆ ಒಪ್ಪಿಸಿ, ಸಹಿ ಹಾಕಿ ಸಮೀಕ್ಷೆ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ ಎನ್ನಲಾಗಿದೆ. ಹೊಸಹುಡ್ಯ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಲಾಗಿದೆ. ನಾಲ್ಕು ತಂಡಗಳನ್ನು ರಚಿಸಿದ್ದು, ರೋವರ್ ಉಪಕರಣ ಬಳಸಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.