Categories
ಕಾರ್ಕಳ ಚಿಕ್ಕಮಗಳೂರು

ಕೊಪ್ಪ ತಾಲ್ಲೂಕು ಒಕ್ಕಲಿಗರ ಸಂಘದ ಮಹಾಸಭೆಯಲ್ಲಿ ಅಶ್ವತ್ ಎಸ್.ಎಲ್. ಅವರಿಗೆ ಸನ್ಮಾನ

ಕೊಪ್ಪ ತಾಲ್ಲೂಕು ಒಕ್ಕಲಿಗರ ಸಂಘದ ಮಹಾಸಭೆಯಲ್ಲಿ ಅಶ್ವತ್ ಎಸ್.ಎಲ್. ಅವರಿಗೆ ಸನ್ಮಾನ
* “ಮಲ್ನಾಡ್ ಐಕಾನ್” ಅಶ್ವತ್ ಎಸ್.ಎಲ್. ಅವರ ಶಿಕ್ಷಣ ಸೇವೆಗಾಗಿ ಗೌರವ
* ಗ್ರಾಮೀಣ ಭಾಗದಲ್ಲೇ ಅಂತರಾಷ್ಟ್ರೀಯ ಮಟ್ಟದ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಕನಸು

NAMMUR EXPRESS NEWS
ಸೆಪ್ಟೆಂಬರ್ 2ರಂದು ನಡೆದ ಕೊಪ್ಪ ತಾಲ್ಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಮುದಾಯದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಕೊಪ್ಪ ತಾಲೂಕಿನ ಸಕ್ರೆಬೈಲ್ ಗ್ರಾಮೀಣ ಭಾಗದ ಮೂಲದವರಾದ, ಕರಾವಳಿಯಲ್ಲಿ ಸ್ಥಾಪಿತ ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್‌ನ ಸಹ ಸಂಸ್ಥಾಪಕರಾದ ಅಶ್ವತ್ ಎಸ್.ಎಲ್. ಅವರಿಗೆ ಗೌರವ ಸಲ್ಲಿಸಲಾಯಿತು.

“ಮಲ್ನಾಡ್ ಐಕಾನ್” ಎಂದೇ ಖ್ಯಾತರಾದ ಅಶ್ವತ್ ಎಸ್.ಎಲ್. ಅವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆ ಇಂದು ಕರ್ನಾಟಕದಷ್ಟೇ ಅಲ್ಲದೆ ದೇಶದ ಅನೇಕ ಭಾಗಗಳಿಂದ ವಿದ್ಯಾರ್ಥಿಗಳನ್ನು ಆಕರ್ಷಿಸಿ ಉತ್ತಮ ಶಿಕ್ಷಣ ನೀಡುತ್ತಿರುವುದರಿಂದ ವಿಶೇಷ ಗುರುತಿಸಿಕೊಂಡಿದೆ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನೈತಿಕ ಮೌಲ್ಯಗಳು ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವಲ್ಲಿ ಅವರ ಪಾತ್ರ ಮಹತ್ತರವಾಗಿದೆ. ಗ್ರಾಮೀಣ ಪ್ರದೇಶದಲ್ಲಿದ್ದರೂ ಅಂತರಾಷ್ಟ್ರೀಯ ಮಟ್ಟದ ಅವಕಾಶಗಳನ್ನು ಒದಗಿಸುವ ದೃಷ್ಟಿಕೋನವು ಅವರನ್ನು ಇತರರಿಂದ ವಿಭಿನ್ನರನ್ನಾಗಿಸಿದೆ. ಈ ಶ್ರೇಷ್ಠ ಸೇವೆಯನ್ನು ಸ್ಮರಿಸಿ ಒಕ್ಕಲಿಗರ ಮಹಾಸಭೆಯಲ್ಲಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅಶ್ವತ್ ಎಸ್.ಎಲ್. ಅವರು, ತಮ್ಮ ಸಾಧನೆಗೆ ಮಲೆನಾಡಿನ ಪರಿಸರ ಮತ್ತು ಜನರೇ ಪ್ರೇರಣೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಈ ಭಾಗದಲ್ಲೇ ಉತ್ತಮ ಶಿಕ್ಷಣ ಸಂಸ್ಥೆ ನಿರ್ಮಿಸುವ ಕನಸನ್ನು ಹೊಂದಿದ್ದೇನೆ ಎಂದು ಅವರು ಅಭಿಪ್ರಾಯಪಟ್ಟರು. “ದೇವರಿಗೆ ಸಲ್ಲಿಸುವ ಸೇವೆ ದೇವರಿಗೆ ತಲುಪುತ್ತದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಅಶಕ್ತರಿಗೆ ಮಾಡುವ ಸೇವೆಯ ಪ್ರತಿಯೊಂದು ಕಣವೂ ದೇವರಿಗೆ ಸೇರುತ್ತದೆ. ಆರೋಗ್ಯ ಮತ್ತು ಶಿಕ್ಷಣ ಸೇವೆಯಲ್ಲಿ ಸಮುದಾಯ ತೊಡಗಿಸಿಕೊಳ್ಳುವುದು ಮಾದರಿಯಾಗಬೇಕು. ಎಲ್ಲರೂ ಒಂದಾಗಿ ಬದುಕಬೇಕು” ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಡಿ. ರಾಜೇಗೌಡ, ರಾಜೀವ್ ಗಾಂಧಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಬಿ.ಸಿ. ಭಗವಾನ್, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಸಹದೇವ್ ಬಾಲಕೃಷ್ಣ, ಉಪಾಧ್ಯಕ್ಷ ಹೆಚ್.ಜೆ. ರಾಜಗೋಪಾಲ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.