ತರೀಕೆರೆಯಲ್ಲಿ ಬಿಜೆಪಿ ಪ್ರತಿಭಟನೆ!
– ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ
– ಚಿಕ್ಕಮಗಳೂರಲ್ಲಿ ಭಾನುಪ್ರಕಾಶ್ ಅವರಿಗೆ ಶ್ರದ್ದಾಂಜಲಿ
NAMMUR EXPRESS NEWS
ತರೀಕೆರೆ: ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಹಾಕಿ ತರೀಕೆರೆ ಪಟ್ಟಣದಲ್ಲಿ ಪ್ರತಿಭಟನೆ ಮಾಡಲಾಯಿತು.
ಜನರಿಗೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸುವುದಕ್ಕಾಗಿ ಪೆಟ್ರೋಲ್ ಬೆಲೆ ಲೀಟರ್ ಗೆ 3 ರೂ,ಡಿಸೇಲ್ ಬೆಲೆ 3.5 ರೂ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತರೀಕೆರೆ ನಗರದ ಗಾಂಧಿ ಸರ್ಕಲ್ ನಲ್ಲಿ ಮಾಜಿ ಶಾಸಕರಾದ ಡಿ.ಎಸ್.ಸುರೇಶ್ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಚಿಕ್ಕಮಗಳೂರಲ್ಲಿ ಭಾನುಪ್ರಕಾಶ್ ಅವರಿಗೆ ಶ್ರದ್ದಾಂಜಲಿ
ಶಿವಮೊಗ್ಗ ಮಾಜಿ ಪರಿಷತ್ ಸದಸ್ಯ ಭಾನು ಪ್ರಕಾಶ್ ಅವರ ನಿಧನದ ಸಲುವಾಗಿ ಚಿಕ್ಕಮಗಳೂರಿನಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಬಿಜೆಪಿ ಪ್ರಮುಖ ನಾಯಕರು, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
