ಮೊದಲ ಚುನಾವಣೆಯಲ್ಲೇ ಅಜ್ಜಂಪುರ ಪಟ್ಟಣ ಪಂಚಾಯ್ತಿ ಚುಕ್ಕಾಣಿ ಹಿಡಿದ ಬಿಜೆಪಿ
* ಗ್ರಾ ಪಂಯಿಂದ ಪ ಪಂಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಮೊದಲ ಚುನಾವಣೆ
* ಹಾಲಿ ಹಾಗೂ ಮಾಜಿ ಶಾಸಕರಿಗೆ ಪ್ರತಿಷ್ಠೆಯ ಕಣವಾಗಿದ್ದ ಚುನಾವಣೆ
NAMMMUR EXPRESS NEWS
ಅಜ್ಜಂಪುರ: ಇಲ್ಲಿನ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಅಧಿಕಾರದ ಚುಕ್ಕಾಣಿ ಬಿಜೆಪಿ ಪಾಲಾಗಿದೆ.
ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕ ಮೊದಲ ಬಾರಿಗೆ ಚುನಾವಣೆ ಭಾನುವಾರ ನಡೆದಿತ್ತು. ಮೊದಲ ಚುನಾವಣೆಯಲ್ಲೇ ಬಿಜೆಪಿ ಅಧಿಕಾರ ಹಿಡಿದಿದೆ. 11 ವಾರ್ಡ್ ಗಳ ಪೈಕಿ 6 ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದು, 5 ವಾರ್ಡ್ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ತರೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ ಎಚ್ ಶ್ರೀನಿವಾಸ್ ಮತ್ತು ಬಿಜೆಪಿ ಮಾಜಿ ಶಾಸಕ ಡಿ ಎಸ್ ಸುರೇಶ್ ಅವರಿಗೆ ಈ ಚುನಾವಣೆ ಪ್ರತಿಷ್ಠೆಯಾಗಿತ್ತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
