Categories
ಅಪಘಾತ ಚಿಕ್ಕಮಗಳೂರು

ಪ್ರಪಾತಕ್ಕೆ ಉರುಳಿದ ಬಸ್: ಮಹಿಳೆ ಸಾವು

ಪ್ರಪಾತಕ್ಕೆ ಉರುಳಿದ ಬಸ್: ಮಹಿಳೆ ಸಾವು
– ಐದಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರ
– ಮೂಡಿಗೆರೆಯ ಚೀಕನಹಳ್ಳಿ ಕ್ರಾಸ್ ಬಳಿ ಘಟನೆ

NAMMUR EXPRESS NEWS
ಮೂಡಿಗೆರೆ: ಖಾಸಗಿ ಬಸ್ಸು ಪ್ರಪಾತಕ್ಕೆ ಉರುಳಿ ಒಬ್ಬ ಮಹಿಳೆ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ ನ.4ರ ಶನಿವಾರ ನಡೆದಿದೆ. ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ (45) ಮೃತ ಮಹಿಳೆ.ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ ನಲ್ಲಿ ಸುಮಾರು 48ಕ್ಕೂ ಹೆಚ್ಚು ಪ್ರವಾಸಿಗರಿದ್ದು, ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ಬಸ್ ಇದಾಗಿದೆ. ಶನಿವಾರ ಬೆಳಗಿನ ಜಾವ 4:45 ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ ಐವರಿಗೆ ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡಿಗೆರೆ ಭಾಗದಲ್ಲಿ ಪದೇ ಪದೇ ಘಟನೆ

ಮೂಡಿಗೆರೆ ಭಾಗದಲ್ಲಿ ಪದೇ ಪದೇ ಇಂತಹ ದುರಂತ ನಡೆಯುತ್ತಿದ್ದೂ ಸಂಬಂಧಪಟ್ಟ ಇಲಾಖೆ ಗಮನಿಸಬೇಕಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.