Categories
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಭೀಕರ ಆಕ್ಸಿಡೆಂಟ್..!

ಚಿಕ್ಕಮಗಳೂರಲ್ಲಿ ಭೀಕರ ಆಕ್ಸಿಡೆಂಟ್..!
– ತಾಯಿ ಮಗ ಸಾವು: ಇನ್ನೊಬ್ಬಳ ಸ್ಥಿತಿ ಗಂಭೀರ
– ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಘಟನೆ

NAMMUR EXPRESS NEWS
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇನ್ನೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ.
ಚಿಕ್ಕಮಗಳೂರು ನಗರದ ಹೊರ ವಲಯದ ಕಣಿವೆ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ನಿರಂಜನ್ (42) ಚೆನ್ನಮ್ಮ (67) ಸ್ಥಳದಲ್ಲೇ ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಮೃತರು ಚಿಕ್ಕಮಗಳೂರಿನ ವಿಜಯಪುರ ಬಡಾವಣೆ ನಿವಾಸಿಗಳಾಗಿದ್ದಾರೆ.

ಮೃತ ನಿರಂಜನ್ ಖಾಸಗಿ ಆಸ್ಪತ್ರೆಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಗಂಭೀರ ಗಾಯಗೊಂಡ ಮಹಿಳೆ ರತ್ನಮ್ಮ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಈ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.