Categories
ಚಿಕ್ಕಮಗಳೂರು

ಕಡೂರಲ್ಲಿ ಸಮೀರ್ ವಿರುದ್ಧ ಕೇಸ್!

ಕಡೂರಲ್ಲಿ ಸಮೀರ್ ವಿರುದ್ಧ ಕೇಸ್!
* ಧರ್ಮಸ್ಥಳ ಅಪಪ್ರಚಾರ ವಿಡಿಯೋ ಪ್ರಕರಣ: ಸಮೀರ್‌ಗೆ ತಪ್ಪದ ಸಂಕಷ್ಟ
* ವಿಹೆಚ್‌ಪಿ ಸದಸ್ಯ ಮಂಜು ಜೈನ್‌ನಿಂದ ದೂರು, ಕಳಸದಲ್ಲೂ ಜೈನ ಸಮುದಾಯದಿಂದ ಕ್ರಮಕ್ಕೆ ಮನವಿ

NAMMMUR EXPRESS NEWS
ಚಿಕ್ಕಮಗಳೂರು: ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಸದಸ್ಯ ಮಂಜು ಜೈನ್ ಅವರಿಂದ ಜಿಲ್ಲೆಯ ಕಡೂರು ತಾಲೂಕಿನ ಪೊಲೀಸ್ ಠಾಣೆಗೆ ದೂರು ನೀಡಿಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಯ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ಮೇಲೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಕಡೂರು ಪೊಲೀಸರು ಮಂಜು ಜೈನ್‌ರಿಂದ ದೂರು ಪಡೆದು ಉನ್ನತ ಅಧಿಕಾರಿಗಳ ನಿರ್ದೇಶನದಂತೆ ಮುಂದಿನ ಕ್ರಮಕ್ಕೆ ಮುಂದಾಗಲಿದ್ದಾರೆ.
ಇನ್ನು ಜಿಲ್ಲೆಯ ಕಳಸ ಪಟ್ಟಣದಲ್ಲೂ ಜೈನ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ಚಿಕ್ಕಮಗಳೂರು ನಗರದಲ್ಲೂ ಕೂಡ 2000ಕ್ಕೂ ಹೆಚ್ಚು ಜನ ಪ್ರತಿಭಟನೆ ನಡೆಸಿ ಹಿಂದೂ ಧರ್ಮದ ಮೇಲೆ ದಬ್ಬಾಳಿಕೆ ಮಾಡಿ ಧರ್ಮಸ್ಥಳವನ್ನ ಅವಹೇಳನ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.