ಚಿಕ್ಕಮಗಳೂರು ಜಿಲ್ಲಾ ನ್ಯೂಸ್
ಬಸ್ ಯೋಜನೆ ಅವ್ಯವಸ್ಥೆ: ಎಬಿವಿಪಿ ಹೋರಾಟ!
– ಚಿಕ್ಕಮಗಳೂರು, ಶೃಂಗೇರಿ ಸೇರಿದಂತೆ ಎಲ್ಲೆಡೆ ಪ್ರತಿಭಟನೆ
– ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಡಾ. ಮೀನಾ ನಾಗರಾಜ್
– ಬಾಳೆಹೊನ್ನೂರು ಬಳಿ ಗೋ ಸಾಗಣೆ ತಡೆ
– ಚಿಕ್ಕಮಗಳೂರು ನಗರದಲ್ಲಿ ಲೋಕಾಯುಕ್ತ ದಾಳಿ!
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎನ್. ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದೇ ವೇಳೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಮೀನಾ ನಾಗರಾಜ್ ಅವರನ್ನು ಸರ್ಕಾರ ನೇಮಕ ಮಾಡಲಾಗಿದೆ. ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಇಲಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ: ಎಬಿವಿಪಿ ಹೋರಾಟ
ಕಾಂಗ್ರೆಸ್ ಪಕ್ಷದ ಮೊದಲ ಭರವಸೆಯಾದ ಶಕ್ತಿ ಯೋಜನೆಯಿಂದ ಉಂಟಾಗುವ ತೊಂದರೆಯಿಂದಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಚಿಕ್ಕಮಗಳೂರು ಮತ್ತು ಶೃಂಗೇರಿ ಸೇರಿ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಶಾಲಾ ಕಾಲೇಜ್ ಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಉಚಿತ ಬಸ್ ಸೇವೆಯಿಂದಾಗಿ ಗ್ರಾಮಾಂತರ ಬಸ್ ಗಳು ಹೌಸ್ ಫುಲ್ ಆಗುತ್ತಿದೆ. ಬಸ್ ಗಳಿಗೆ ಹತ್ತಲಾಗದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಬೆಳಗ್ಗೆ-ಸಂಜೆ ಬಸ್ ಗಳ ಸಂಖ್ಯೆ ಹೆಚ್ಚಿಸುವಂತೆ ಆಗ್ರಹಿಸಿದರು.
ಅಕ್ರಮ ಜಾನುವಾರು ಸಾಗಾಟ ತಡೆ!
ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪಿಕಪ್ ವಾಹನ ತಡೆದು ತಪಾಸಣೆ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹ್ಯಾರಂಬಿ ಗ್ರಾಮದ ಬಳಿ ನಡೆದಿದೆ. ವಾಹನ ತಡೆದ ವೇಳೆ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪಿಕಪ್ ನಲ್ಲಿ 5 ಜಾನುವಾರುಗಳನ್ನು ಕಾಲು ಕಟ್ಟಿ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಚಿಕ್ಕಮಗಳೂರಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ
ಬೆಳ್ಳಂ-ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆಯ ದೂರಿನ ಮೇಲೆ ಲೋಕಾಯುಕ್ತ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯಲ್ಲಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಹಿನ್ನಲೆಯಲ್ಲಿ ನಿರ್ಮಿತಿ ಕೇಂದ್ರದ ಯೋಜನ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ, ಏಕಕಾಲದಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳು ಮನೆ ಸೇರಿದಂತೆ ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ನಡೆದಿದೆ.ಜಯನಗರ ಬಡಾವಣೆಯಲ್ಲಿ ಇರುವ ಗಂಗಾಧರ್ ಮನೆ, ರಾಮನಹಳ್ಳಿಯಲ್ಲಿರು ಪೆಟ್ರೋಲ್ ಬಂಕ್ ಮೇಲೆ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ಮಾಡಿದೆ.
ಇದನ್ನೂ ಓದಿ : ನಾಯಿ ವೇದಿಕೆ ಮೇಲೆ ಪ್ರಶಸ್ತಿ ಪಡೆಯಿತು!!
HOW TO APPLY : NEET-UG COUNSELLING 2023