ಚಿಕ್ಕಮಗಳೂರು ಉಸ್ತುವಾರಿ ಸಚಿವ ಜಾರ್ಜ್ ದಿಟ್ಟ ಹೆಜ್ಜೆ!
– ನಿರ್ಧಾರಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್ ಸ್ವಾಗತ
– ಅರಣ್ಯ ಇಲಾಖೆ, ಕಂದಾಯ ಇಲಾಖೆ ಸಮಸ್ಯೆಗಳಿಗೆ ಪರಿಹಾರ
NAMMUR EXPRESS NEWS
ಚಿಕ್ಕಮಗಳೂರು: ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ತಲೆದೋರಿರುವ ಸಮಸ್ಯೆಗಳ ಪರಿಹಾರಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಜನತಾ ದರ್ಶನ ನಡೆಸಿ ಪರಿಹರಿಸಲು ಕೈಗೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವರ ದಿಟ್ಟ ನಿರ್ಧಾರವನ್ನು ಜಿಲ್ಲಾ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು,ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ಜನತಾ ದರ್ಶನದ ಮೂಲಕ ಕ್ರಮಕೈಗೊಳ್ಳುವಂತೆ ಸಚಿವರಲ್ಲಿ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿಕೊಂಡಿದ್ದು, ಮನವಿಗೆ ಉಸ್ತುವಾರಿ ಸಚಿವರು ಸ್ಪಂದಿಸುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿರುವುದು ಜಿಲ್ಲೆಯ ಜನರಲ್ಲಿ ಆಶಾಭಾವನೆ ಮೂಡಿದೆ ಎಂದು ಹೇಳಿದ್ದಾರೆ.
ಹಲವಾರು ವರ್ಷಗಳಿಂದ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದು, ಸಮಸ್ಯೆ ಬಗೆಹರಿಸಲು ಸಾಧ್ಯವಾಗಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಅವರು ಜಿಲ್ಲೆಯ ಆಗು ಹೋಗುಗಳನ್ನು ಹತ್ತಿರದಿಂದ ಬಲ್ಲವರಾಗಿದ್ದು, ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಕೊಂಡ ಬಳಿಕ ನಿರಂತರ ಪ್ರವಾಸ, ಸಭೆಗಳನ್ನು ನಡೆಸುವ ಮೂಲಕ ಸಲಹೆ ಸೂಚನೆಗಳೊಂದಿಗೆ ಸಮಸ್ಯೆ ಬಗೆಹರಿಸಲು ಪಣತೊಟ್ಟಿದ್ದಾರೆ. ವಿಧಾನಸೌಧದಲ್ಲಿ ಜಿಲ್ಲೆಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಗಳ ಸಭೆ ನಡೆಸುವ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚಿಸಿ ಸಲಹೆ ಪಡೆದಿರುವುದು ಜಿಲ್ಲೆಯ ಜನರಲ್ಲಿ ಭರವಸೆಯ ಬೆಳಕನ್ನು ಮೂಡಿಸಿದ್ದಾರೆ.