Categories
ಚಿಕ್ಕಮಗಳೂರು

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವು ಹೆಚ್ಚಳ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವು ಹೆಚ್ಚಳ
– ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು
– ಅನೇಕ ರೈತರ ಅಡಕೆ ತೋಟ ಸಂಹಾರ

NAMMUR EXPRESS NEWS
ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತು. ಮಲೆನಾಡಿನ ಒತ್ತುವರಿ ಸಮಸ್ಯೆ ಇರುವ ಜನರು, ಒತ್ತುವರಿ ತೆರವು ಮಾಡುವುದನ್ನು ನಿಲ್ಲಿಸಬೇಕೆಂದು ಅರಣ್ಯ ಇಲಾಖೆಗೆ, ಸಚಿವರಿಗೆ ಹಾಗೂ ಸರ್ಕಾರದ ವಿರುದ್ಧವಾಗಿ ಅದೆಷ್ಟೋ ಹೋರಾಟ, ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾವನ್ನೂ ಮಾಡಿದ್ದರು. ಪ್ರತಿಭಟನೆಗಳ ಬಳಿಕ ಮಲೆನಾಡಿನಲ್ಲಿ ಕೆಲವು ದಿನಗಳಿಂದ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ನಿಲ್ಲಿಸಿದ್ದರು. ಆದರೆ, ಈಗ ಮತ್ತೆ ಅರಣ್ಯ ಇಲಾಖೆಯಿಂದ ಒತ್ತುವರಿ ಮಾಡಿರುವ ಜಾಗವನ್ನು ತೆರವುಗೊಳಿಸುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಚ್ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಬುಧವಾರದಂದು ಬೆಳ್ಳಂ ಬೆಳಿಗ್ಗೆಯೇ ಒತ್ತುವರಿ ಮಾಡಿರುವ ಜಾಗಕ್ಕೆ ಅರಣ್ಯ ಇಲಾಖೆಯ ನೂರಾರು ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿದ್ದು, ಎಚ್ ತಿಮ್ಮಾಪುರ ಗ್ರಾಮದಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಅಡಿಕೆ ತೋಟವನ್ನು ತೆರವುಗೊಳಿಸಿದ್ದಾರೆ. ಇಂದು ತೆರವುಗೂಳಿಸಿರುವ ಜಾಗ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರ ಕುಟುಂಬದ ಟಿ ಜೆ ಗೋಪಿಕುಮಾರ್ ಅವರು ಒತ್ತುವರಿ ಮಾಡಿಕೊಂಡವರು ಎನ್ನಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.