ಚಿಕ್ಕಮಗಳೂರು ಪ್ರವಾಸಿ ತಾಣಗಳು ಬಂದ್..!
– 6 ದಿನಗಳ ಕಾಲ ಪ್ರವಾಸಿಗರಿಗೆ ನಿಷೇಧ
– ಡಿ.22ರಿಂದ 27ರವರೆಗೆ ಪ್ರವಾಸ ಇಲ್ಲ
– ಏನಿದು ನಿಯಮ..? ಏಕೆ ನಿಷೇಧ..?
NAMMUR EXPRESS NEWS
ಚಿಕ್ಕಮಗಳೂರು: ವರ್ಷಾಂತ್ಯಕ್ಕೆ ಪಶ್ಚಿಮ ಘಟ್ಟಗಳ ಸಾಲಿನ ಪ್ರವಾಸಿ ತಾಣಗಳಿಗೆ ಆರು ದಿನಗಳ ಕಾಲ ಪ್ರವೇಶ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಪ್ರವಾಸಿ ತಾಣಗಳಿಗೆ ಪ್ರವೇಶ ಡಿಸೆಂಬರ್ 22 ರಿಂದ 27ರವರೆಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಡಿಸೆಂಬರ್ 23, 24 ವಾರಾಂತ್ಯ ಇದೆ. 25ರಂದು ಸೋಮವಾರ ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ ಇದ್ದು, ಹೀಗಾಗಿ ಈ ಸಂದರ್ಭದಲ್ಲಿ ಅನೇಕರು ಪ್ರವಾಸಕ್ಕೆ ಬರುವ ಸಾಧ್ಯತೆ ಇದೆ. ಹೀಗಾಗಿ ಜಿಲ್ಲಾಡಳಿತ ಮುಂಚಿತವಾಗಿಯೇ ಮಾಹಿತಿ ನೀಡಿದೆ.