ಚಿಕ್ಕಮಗಳೂರು:ಮಂಗನ ಕಾಯಿಲೆಗೆ ಓರ್ವ ವೃದ್ದೆ ಬಲಿ
– ಮಂಗನ ಕಾಯಿಲೆಗೆ ಜಿಲ್ಲೆಯಲ್ಲಿ ಮೊದಲ ಬಲಿ
– ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಮಂಗನ ಕಾಯಿಲೆ ಪತ್ತೆ
NAMMUR EXPRESS NEWS
ಚಿಕ್ಕಮಗಳೂರು : ಮಂಗನ ಕಾಯಿಲೆಗೆ ತುತ್ತಾಗಿದ್ದ 65 ವರ್ಷದ ಕಮಲಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕು ಕಟ್ಟಿನಮನೆ ಗ್ರಾಮದಲ್ಲಿ ನಡೆದಿದೆ. ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ.
ತಾಯಿ, ಮಗ ಮೇಲ್ಪಾಲ್ ಗ್ರಾಮದ ಕಾಫಿತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಕೊಪ್ಪ ಆಸ್ಪತ್ರೆಗೆ ದಾಖಲಾಗಿದ್ದರು.ಮಂಗನ ಕಾಯಿಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇದ್ದ ಹಿನ್ನಲೆ ಚಿಕಿತ್ಸೆಗೆಂದು ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಡಿದ್ದಾರೆ.ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಹೀಗಾಗಿ, ಮಲೆನಾಡು ತಾಲೂಕುಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.