ಚಿಕ್ಕಮಗಳೂರು ಟಾಪ್ 4 ನ್ಯೂಸ್..!!
– ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ
– ಆರೋಗ್ಯ ಪೂರ್ಣ ಸಮಾಜದ ಗುರಿ ಹೊಂದಿದ್ದ ಬಿಜಿಎಸ್ – ಶ್ರೀ ಗುಣನಾಥ ಸ್ವಾಮೀಜಿ
– ರೈಲು ಹಳಿಗೆ ಸಿಲುಕಿ ಯುವಕ ಸಾವು
– ಚಿರತೆ ದಾಳಿಗೆ ದನದ ಕರು ಬಲಿ
NAMMUR EXPRESS NEWS
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಆಯ್ಕೆ..!
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿಕ್ಕಮಗಳೂರು ಜಿಲ್ಲಾ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರ ಆಯ್ಕೆ ಮತ್ತು ಜಿಲ್ಲಾ ಮಾಸಿಕ ಸಭೆ ನಡೆಯಿತು. ಈ ಬಾರಿಯ ಜಿಲ್ಲಾ ಸಾಹಿತ್ಯ ಸಮ್ಮೇಳನವು ಮಾರ್ಚ್ 07 ಮತ್ತು 8 ರಂದು ಚಿಕ್ಕಮಗಳೂರು ಜಿಲ್ಲೆ ತರೀಕೆರೆಯ ಬಯಲು ರಂಗಮಂದಿರದಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷರಾದ ಸೂರಿ ಶ್ರೀನಿವಾಸ್ ತಿಳಿಸಿದರು. ಜಿಲ್ಲಾ ಸಮ್ಮೆಳನಕ್ಕೆ ಆಗಮಿಸುವುದರೊಂದಿಗೆ ತನು-ಮನ-ಧನ ಸಹಾಯ ಮಾಡಬೇಕೆಂದು ವಿನಂತಿಸಿಕೊಂಡಿದ್ದಾರೆ. ಎಲ್ಲಾ ತಾಲೂಕುಗಳಿಂದ ಸಮ್ಮೇಳನದ ಅಧ್ಯಕ್ಷರ ಆಯ್ಕೆಗಾಗಿ ಹೆಸರುಗಳು ಬಂದಿದ್ದವು,
ಕೊನೆಯದಾಗಿ ತರೀಕೆರೆ ತಾಲೂಕಿನ ರಂಗೇನಹಳ್ಳಿಯ ಡಾ ಎಂ.ಹೆಚ್. ಮರುಳಸಿದ್ದಯ್ಯ ಪಟೇಲ್ ಅವರನ್ನು ಅಂತಿಮಗೊಳಿಸಲಾಗಿದೆ.
– ಆರೋಗ್ಯ ಪೂರ್ಣ ಸಮಾಜದ ಗುರಿ ಹೊಂದಿದ್ದ ಬಿಜಿಎಸ್- ಶ್ರೀಗುಣನಾಥ ಸ್ವಾಮೀಜಿ..
ಚಿಕ್ಕಮಗಳೂರು: ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಪರಮಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳು ಎಲ್ಲಾ ವರ್ಗದ ಜನರ ತಲೆಗೊಂದು ಮರ ಇರಬೇಕೆಂಬ ಸಂಕಲ್ಪ ಮಾಡಿ ಪರಿಸರ ವನಕ್ರಾಂತಿಯನ್ನು ಮಾಡಿದ್ದರು ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಹೇಳಿದ್ದಾರೆ.
ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಒಕ್ಕಲಿಗರ ಸಂಘ ಏರ್ಪಡಿಸಿದ್ದ ಆದಿಚುಂಚನಗಿರಿ ಮಹಾ ಸಂಸ್ಥಾನದ ಜಗದ್ಗುರು ಭೈರವೈಕ್ಯ ಡಾ .ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ 80ನೇ ಜಯಂತ್ಯೋತ್ಸವ, ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಹಿರಿಯ ಪರಮ ಪೂಜ್ಯರ ಹೆಸರಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ಕಾರ್ಯ ನಿಜವಾದ ಪುಣ್ಯದ ಕಾರ್ಯ, ದೇವರು ದೇವಾಲಯಗಳಿಂದ ಮಾತ್ರ ಪುಣ್ಯದ ಕಾರ್ಯ ಅಲ್ಲ ಸಮಾಜಮುಖಿ ಕಾರ್ಯಗಳಿಂದ ಮಾತ್ರ ಸಾಧ್ಯ ಎಂದರು. ಬಾಲಗಂಗಾಧರನಾಥ ಮಹಾಸ್ವಾಮಿಗಳು ದೇವಸ್ಥಾನ, ದೇವರು ಎಂಬುದಕ್ಕಿಂತ ಹೆಚ್ಚಾಗಿ ಸಮಾಜದಲ್ಲಿನ ಬಡವರು, ದೀನದಲಿತರು, ಅನಾಥರ ಸೇವೆ ಮಾಡಬೇಕೆಂದು ಹೇಳುತ್ತಿದ್ದರು ಜೊತೆಗೆ ಅದನ್ನು ಸಾಧಿಸಿ ತೋರಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆಂದು ಹೇಳಿದರು.
– ರೈಲು ಹಳಿಗೆ ಸಿಲುಕಿ ಯುವಕ ಸಾವು,ಆತ್ಮಹತ್ಯೆಯ ಶಂಕೆ..!??
ಚಿಕ್ಕಮಗಳೂರು: ತಾಲೂಕಿನ ಅಂಬಳೆ ಸಮೀಪದ ಹರಿಹರದಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಓಂಕಾರೇಗೌಡ ಎಂಬುವರ ಪುತ್ರ ಯತೀಶ್ (21) ರೈಲ್ವೆ ಹಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಅರಸೀಕೆರೆ ರೈಲ್ವೇ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಪ್ರೇಮ ವೈಫಲ್ಯದಿಂದಾಗಿ ಯುವಕ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
– ಚಿರತೆ ದಾಳಿಗೆ ದನದ ಕರು ಬಲಿ..!!
ಖಾಂಡ್ಯ: ಖಾಂಡ್ಯ ಹೋಬಳಿ ಹುಯಿಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕರಗಣೆ ಎಂಬ ಗ್ರಾಮದಲ್ಲಿ ಚಿರತೆ ದಾಳಿಗೆ ದನದ ಕರುವೊಂದು ಬಲಿಯಾಗಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿದ್ದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಲೆನಾಡಿನಲ್ಲಿ ದಿನೇ ದಿನೇ ಮಾನವರು ಹಾಗು ಸಾಕು ಪ್ರಾಣಿಗಳ ಮೇಲೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು ಇದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಅರಣ್ಯ ಇಲಾಖೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕಿದೆ.