Categories
ಚಿಕ್ಕಮಗಳೂರು

ಚಿಕ್ಕಮಗಳೂರು ಟಾಪ್ ನ್ಯೂಸ್

ಚಿಕ್ಕಮಗಳೂರು ಟಾಪ್ ನ್ಯೂಸ್

* ಕುಡಿದು ಮತ್ತಿನಲ್ಲಿ ತಾಯಿಯನ್ನೇ ಕೊಂದ ಮಗ
* ಕೋಡಿ ಬಿದ್ದ ಐತಿಹಾಸಿಕ ಅಯ್ಯನಕೆರೆ ಹಾಗೂ ಮದಗದಕೆರೆ

NAMMUR EXPRESS NEWS

* ಕುಡಿದು ಮತ್ತಿನಲ್ಲಿ ತಾಯಿಯನ್ನೇ ಕೊಂದ ಮಗ
ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂದು, ಆಕೆ ಮೃತ ದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನ 52 ವರ್ಷದ ಭವಾನಿ ಎಂದು ಗುರುತಿಸಲಾಗಿದೆ.
ಅಮ್ಮನನ್ನೇ ಕೊಂದ ಮಗ ಪವನ್ 28 ವರ್ಷದ ಯುವಕ. ಪವನ್ ಮದುವೆ ಕೂಡ ಆಗಿರಲಿಲ್ಲ. ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ. ಕಳೆದ ರಾತ್ರಿ ತಾಯಿಯನ್ನ ಕೊಂದು ಮನೆಯೊಳಗೆ ಬೆಂಕಿ ಹಾಕಿ ಸುಟ್ಟು ಹಾಕಿದ್ದಾನೆ. ಬಳಿಕ ತಾಯಿ ಮೃತದೇಹ ಬೆಂಕಿಯಲ್ಲಿ ಬೇಯುತ್ತಿದ್ದರೆ ಕೊಲೆಗಾರ ಮಗ ಪ್ರಜ್ಞೆ ಇಲ್ಲದವನಂತೆ ಅಲ್ಲೇ ಪಕ್ಕದಲ್ಲಿ ಮಲಗಿದ್ದಾನೆ. ತಾಯಿ ಭವಾನಿ ಮೃತದೇಹ ಬಹುತೇಕ ಸುಟ್ಟುಹೋಗಿದ್ದು ಕಾಲು ಹಾಗೂ ಕೈ ಮಾತ್ರ ಉಳಿದಿದೆ.
ಅಕ್ಕಪಕ್ಕದವರಿಂದ ವಿಷಯ ತಿಳಿದ ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಾಯಿಯನ್ನ ಕೊಂದ ಮಗ ಪವನ್ ನನ್ನ ಆಲ್ದೂರು ಪೊಲೀಸರು ಬಂಧಿಸಿದ್ದಾರೆ.

* ಕೋಡಿ ಬಿದ್ದ ಐತಿಹಾಸಿಕ ಅಯ್ಯನಕೆರೆ ಹಾಗೂ ಮದಗದಕೆರೆ 
ಕಡೂರು: ತಾಲೂಕಿನ ಸಖರಾಯಪಟ್ಟಣ ಸಮೀಪದ 2800 ಎಕರೆಗೂ ಹೆಚ್ಚು ವಿಸ್ತೀರ್ಣದ ಐತಿಹಾಸಿಕ ಅಯ್ಯನಕೆರೆ ಹಾಗೂ ಮದಗದ ಕೆರೆ ತುಂಬಿ ಕೋಡಿ ಬಿದ್ದಿವೆ.
ಏಳು ಗುಡ್ಡಗಳ ಮಧ್ಯೆ ಇರುವ ಬೃಹತ್ ಕೆರೆಗಳು ತುಂಬಿ ಕೋಡಿ ಬಿದ್ದಿವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮುಳ್ಳಯ್ಯನಗಿರಿ ಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಅಯ್ಯನಕೆರೆ ಹಾಗೂ ಮದಗದ ಕೆರೆ ತುಂಬಿ ಕೋಡಿ ಬಿದ್ದಿದೆ. ಇದರಿಂದ ಕೆರೆ ಸುತ್ತಮುತ್ತಲಿನ 34 ಹಳ್ಳಿಯ ಜನ-ಜಾನುವಾರುಗಳ ನೀರಿನ ಬವಣೆ ತಪ್ಪಿದಂತಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.