Categories
ಚಿಕ್ಕಮಗಳೂರು

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹಾಸ್ಯ ನಟ ಚಂದ್ರಪ್ರಭಾ ಕಿರಿಕ್!

ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹಾಸ್ಯ ನಟ ಚಂದ್ರಪ್ರಭಾ ಕಿರಿಕ್!
– ಚಿಕ್ಕಮಗಳೂರಲ್ಲಿ ಬೈಕ್ ಸವಾರನಿಗೆ ಗುದ್ದಿ ಪರಾರಿ
– ಮಾನವೀಯತೆ ಇಲ್ಲವೆಂದು ಜನರ ಆರೋಪ..!
– ಬೈಕ್ ಒಂದಕ್ಕೆ ಗುದ್ದಿದ ವಿಡಿಯೋ ಎಲ್ಲೆಡೆ ವೈರಲ್

NAMMUR EXPRESS NEWS
ಚಿಕ್ಕಮಗಳೂರು: ಹಾಸ್ಯನಟ ಚಂದ್ರಪ್ರಭಾ ಈಗ ವಿವಾದವೊಂದಕ್ಕೆ ಗುರಿಯಾಗಿದ್ದಾರೆ. ಅಪಘಾತ ಮಾಡಿ ಕಾರು ನಿಲ್ಲಿಸದೆ ಪರಾರಿಯಾಗಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಬೈಕ್ ಸವಾರನಿಗೆ ಗುದ್ದಿದ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹಾಸ್ಯನಟ ಚಂದ್ರಪ್ರಭಾ ಅವರು ಪರಾರಿಯಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹಾಸ್ಯನಟ ಚಂದ್ರಪ್ರಭಾ ಅವರ ಕಾರು ಚಿಕ್ಕಮಗಳೂರಿನಲ್ಲಿ ಬೈಕ್ ಒಂದಕ್ಕೆ ಗುದ್ದಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಏನಿದು ಘಟನೆ?

ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ವೇಶ್ ಎಂಬುವವರು ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ. ಚಂದ್ರಪ್ರಭಾ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ವೇಶ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.