ವಿಜಯೇಂದ್ರ ಬಂಧನ ಖಂಡಿಸಿ ಕಾಫಿ ನಾಡಲ್ಲಿ ಹೋರಾಟ!
– ಚಿಕ್ಕಮಗಳೂರಲ್ಲಿ ಬಿಜೆಪಿ ನಾಯಕರಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ
– ಮೂಡಾ ಹಗರಣದಲ್ಲಿ ರಾಜ್ಯ ಸರ್ಕಾರದ ಶಾಮೀಲು: ಆಕ್ರೋಶ
NAMMUR EXPRESS NEWS
ಚಿಕ್ಕಮಗಳೂರು: ಮೂಡಾ ಹಗರಣದ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಚಲೋ ಪ್ರತಿಭಟನೆಗೆ ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರ ಹಾಗೂ ಹಲವು ಮುಖಂಡಯನ್ನು ಬಂಧಿಸಿರುವುದನ್ನು ವಿರೋಧಿಸಿ ಚಿಕ್ಕಮಗಳೂರಿನಲ್ಲಿ ಜಿಲ್ಲಾ ಬಿಜೆಪಿಯಿಂದ ರಸ್ತೆ ತಡೆದು ಧೀಡೀರ್ ಪ್ರತಿಭಟನೆ ಮಾಡಲಾಯಿತು.
ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಯಡಿಯೂರಪ್ಪ ರವರನ್ನು ಪೋಲಿಸ್ ನವರು ಬಂಧಿಸಿರುವುದನ್ನು ಖಂಡಿಸಿ ಹಾಗೂ ಮೈಸೂರು ಮೂಡಾ ಹಗರಣ ಕುರಿತು ತನಿಖೆ ನಡೆಸಲು ಕೋರಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ವತಿಯಿಂದ ರಸ್ತೆ ತಡೆ ಮಾಡಿ ಪ್ರತಿಭಟನೆಯನ್ನು ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ದೇವರಾಜ್ ಶೆಟ್ಟಿ .ನಗರ ಅಧ್ಯಕ್ಷರು ಪುಷ್ಪರಾಜ್, ಗ್ರಾಮಾಂತರ ಅಧ್ಯಕ್ಷರು ವಿಜಯಕುಮಾರ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮೂರಪ್ಪ, ರಾಜ್ಯ ಎಸ್ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಸೀತಾರಾಮ್ ಭರಣ್ಯ., ಚಿತ್ರದುರ್ಗದ ಉಸ್ತುವಾರಿಯಾದ ಪ್ರೇಮ್ ಕುಮಾರ್, ರಾಜ್ಯ ಒಬಿಸಿ ಪ್ರಧಾನ ಕಾರ್ಯದರ್ಶಿ ರಾಜಪ್ಪ ನಾರಾಯಣ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಜಿ, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷರಾದ ಸಂತೋಷ್ ಕೋಟ್ಯಾನ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಜಸಂತ ಅನಿಲ್, ಜಿಲ್ಲಾ ವಕ್ತಾರರಾದ ಹಿರೇಮಗಳೂರು ಪುಟ್ಟಸ್ವಾಮಿ,ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷರು ಕುರುವಂಗಿ ವೆಂಕಟೇಶ್, ನಗರ ಓಬಿಸಿ ಮೋರ್ಚಾದ ಅಧ್ಯಕ್ಷರಾದ ಜಯವರ್ಧನ್ ಭರಣಿ, ರೈತ ಮೋರ್ಚಾ ಅಧ್ಯಕ್ಷರಾದ ನಿಶಾಂತ್, ನಗರದ ಎಲ್ಲಾ ಮೋರ್ಚದ ಪ್ರಧಾನ ಕಾರ್ಯದರ್ಶಿಗಳು,ಸದಸ್ಯರುಗಳು ಎಲ್ಲಾ ವಿಭಾಗದ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.