ಡಿ.13ಕ್ಕೆ ದತ್ತ ಜಯಂತಿ ಉತ್ಸವ ಶುರು!
* ಡಿ.12 ರಂದು ಅನುಸೂಯ ಜಯಂತಿ: ದತ್ತ ಭಕ್ತರು, ಬೃಹತ್ ಶೋಭಾಯಾತ್ರೆ
* 25,000ಕ್ಕೂ ಅಧಿಕ ದತ್ತ ಭಕ್ತರ ಆಗಮನ
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ನೂರಾರು ದತ್ತ ಭಕ್ತರು ಮಾಲಾಧಾರಣೆ ಮಾಡುವ ಮೂಲಕ ದತ್ತ ಜಯಂತಿ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಿತು.
ಮಾಜಿ ಸಚಿವ ಸಿ.ಟಿ.ರವಿ ಹಾಗೂ ಭಜರಂಗದಳ ಮುಖಂಡ ರಘು ಸಖಲೇಶಪುರ ಸೇರಿದಂತೆ ಮಲೆನಾಡ, ಕರಾವಳಿಯ ಸಾವಿರಾರು ದತ್ತ ಭಕ್ತರು ಮಾಲಾಧಾರಣೆ ಮಾಡಿದರು.
ಡಿ. 12ರಂದು ಅನುಸೂಯ ಜಯಂತಿ, ಡಿ. 13 ರಂದು ಚಿಕ್ಕಮಗಳೂರು ನಗರದಲ್ಲಿ ದತ್ತ ಭಕ್ತರು ಹಾಗೂ ಸಾರ್ವಜನಿಕರಿಂದ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿದೆ.
25 ಸಾವಿರಕ್ಕೂ ಅಧಿಕ ಭಕ್ತರು ಭಾಗವಹಿಸಲಿದ್ದಾರೆ. ಡಿ.14 ರಂದು ರಾಜ್ಯದ ಮೂಲೆಮೂಲೆಗಳಿಂದ ಬರುವ ಅಪಾರ ಸಂಖ್ಯೆಯ ಭಕ್ತರು ದತ್ತಪೀಠಕ್ಕೆ ತೆರಳಿ ಪಾದುಕೆ ದರ್ಶನ ಪಡೆಯಲಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಿಂದ ಬರುವ 25,000ಕ್ಕೂ ಅಧಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ದತ್ತಜಯಂತಿಯ ಸೂಕ್ಷ್ಮ ದಿನವಾಗಿದ್ದು ಜಿಲ್ಲಾದ್ಯಂತ ಸಾವಿರಾರು ಪೊಲೀಸರ ಹದ್ದಿನ ಕಣ್ಣಿಡಲಿದ್ದಾರೆ. ಇಂದಿನಿಂದ 9 ದಿನಗಳ ಕಾಲ ಚಿಕ್ಕಮಗಳೂರು ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಪೊಲೀಸರು ಸೂಕ್ತ ಬಂದೋಬಸ್ತ್ ಒದಗಿಸಿದ್ದಾರೆ.
