ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿಯಿಂದ ಆಹೋರಾತ್ರಿ ಧರಣಿ
* ನಮ್ಮ ಭೂಮಿ – ನಮ್ಮ ಹಕ್ಕು ಹೆಸರಿನಲ್ಲಿ ಧರಣಿ
* ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಿಂದ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ
NAMMUR EXPRESS NEWS
ಚಿಕ್ಕಮಗಳೂರು: ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ರೈತರ ಜಮೀನಿನ ದಾಖಲೆಗಳಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಿಸಿ ರೈತರ ಜಮೀನನನ್ನು ವಕ್ಫ್ ಬೋರ್ಡ್ ಜಾಗ ಎಂದು ಹೇಳಲಾಗುತ್ತಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಆಜಾದ್ ಪಾರ್ಕ್ನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಅಹೋರಾತ್ರಿ ಪ್ರತಿಭಟನೆಗೆ ಕರೆ ನೀಡಲಾಗಿದೆ.
ದಿ.21:11:2024 ರ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿರುವ ನಮ್ಮ ಭೂಮಿ – ನಮ್ಮ ಹಕ್ಕು ಎಂಬ ಆಹೋರಾತ್ರಿ ಧರಣಿ ಪ್ರತಿಭಟನೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಭಾಗಿಯಾಗುವ ನಿರೀಕ್ಷೆಯಿದೆ.
ಈ ಮೂಲಕ ಪ್ರಸ್ತುತ ಬೆಳವಣಿಗೆಯನ್ನು ಕಂಡಿಸಿ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆಗೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಎಲ್ಲಾ ತಯಾರಿ ನಡೆಸಿದೆ.