Categories
ಚಿಕ್ಕಮಗಳೂರು

ಮೂಡಿಗೆರೆಯಲ್ಲಿ ದೀಪಕ್ ದೊಡ್ಡಯ್ಯ ಆಸರೆ!

ಮೂಡಿಗೆರೆಯಲ್ಲಿ ದೀಪಕ್ ದೊಡ್ಡಯ್ಯ ಆಸರೆ!

– ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ: ಸಾಂತ್ವನ
– ಜನರ ಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಿ ಪರಿಹಾರ ನೀಡಲು ಪಟ್ಟು

NAMMUR EXPRESS NEWS

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಮಳೆಯಿಂದ ಹಾನಿಯಾದ ಮನೆಗಳಿಗೆ ಭೇಟಿ ನೀಡಿದ ಬಿಜೆಪಿ ನಾಯಕ ದೀಪಕ್ ದೊಡ್ಡಯ್ಯ ವಸ್ತುಸ್ಥಿತಿಯನ್ನು ನೋಡಿ ನೊಂದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೂಡಿಗೆರೆ ತಾಲೂಕಿನಲ್ಲಿ ಅತಿಯಾದ ಮಳೆಯಿಂದಾಗಿ ರಸ್ತೆ,ಮನೆಗಳಿಗೆ ತೀವ್ರ ಹಾನಿಯಾಗಿದ್ದು ಜನ ಸಂಕಷ್ಟದಲ್ಲಿದ್ದಾರೆ. ಇಂತಹ ಜನರ ಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.ಈ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳು,ಪ್ರಮುಖರು ಉಪಸ್ಥಿತರಿದ್ದರು.

ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಲೆನಾಡಲ್ಲಿ ಭಾರೀ ನಷ್ಟವಾಗಿದ್ದು, ಮನೆ, ಅಸ್ತಿ ಪಾಸ್ತಿ ನಷ್ಟವಾಗಿದೆ. ಮೂಡಿಗೆರೆ ತಾಲೂಕಲ್ಲಿ ಕೂಡ ಅಪಾರ ನಷ್ಟವಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.