ಶೃಂಗೇರಿ ಶಾರದೆ ದರ್ಶನಕ್ಕೆ ವಸ್ತ್ರ ಸಂಹಿತೆ ಜಾರಿ!
– ಭಾರತೀಯ ಸಂಪ್ರದಾಯಿಕವಲ್ಲದ ಉಡುಗೆ ತೊಟ್ಟು ಬಂದವರಿಗೆ ನೋ ಎಂಟ್ರಿ
– ಆ. 15ರಿಂದ ನೂತನ ವಸ್ತ್ರ ಸಂಹಿತೆ ಜಾರಿ
NAMMUR EXPRESS NEWS
ಶೃಂಗೇರಿ: ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಯ ಶ್ರೀ ಶಾರದಾ ಪೀಠ ಶೃಂಗೇರಿಯಲ್ಲಿ ದಿನಾಂಕ: 15-08-2024ರ ಗುರುವಾರದಿಂದ ಶ್ರೀ ಶಾರದಮ್ಮನವರ ದರ್ಶನಕ್ಕೆ ಬರುವ ಭಕ್ತಾದಿಗಳು ಭಾರತೀಯ ಸಂಪ್ರದಾಯಿಕ ಉಡುಗೆಯಲ್ಲಿ ಬರಲು ಶಾರದಾ ಪೀಠ ಶೃಂಗೇರಿಯ ಆಡಳಿತ ಅಧಿಕಾರಿಗಳು ವಿನಂತಿಸಿದ್ದಾರೆ. ಭಾರತೀಯ ಸಾಂಪ್ರದಾಯಕ ವಲ್ಲದ ಉಡುಗೆಯನ್ನು ತೊಟ್ಟು ಬಂದವರಿಗೆ ಅರ್ಧ ಮಂಟಪದ ಒಳಗೆ ಪ್ರವೇಶವಿರುವುದಿಲ್ಲ. ಹೊರಗಿನ ಪ್ರಕಾರದಿಂದಲೇ ದೇವರ ದರ್ಶನವನ್ನು ಪಡೆಯಬೇಕಾಗುತ್ತದೆ. ಪುರುಷರು ಧೋತಿ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ ರವಿಕೆ, ಸಲ್ವಾರ್ ಜೊತೆಗೆ ದುಪಟ್ಟ ಅಥವಾ ಲಂಗ ದಾವಣಿ ಗಳಂತ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ.