ಕುಡಿದ ಮತ್ತಲ್ಲಿ ಪತ್ನಿ ಹೊಡೆದು ಕೊಂದ ಗಂಡ!
– ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ಘಟನೆ
– ಶೃಂಗೇರಿಯಲ್ಲಿ ಅಕ್ರಮ ಮದ್ಯದ ವಿರುದ್ಧ ಸಿಡಿದೆದ್ದ ಜನ
– ಹೊರನಾಡು ಬಳಿ ಎರಡು ವಾಹನಗಳ ಡಿಕ್ಕಿ
NAMMUR EXPRESS NEWS
ಮೂಡಿಗೆರೆ: ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ. ಪದ್ಮಾಕ್ಷಿ (40) ಮೃತ ಮಹಿಳೆ. ತನ್ನ ಮನೆಯ ಮುಂಭಾಗದಲ್ಲಿ ಶನಿವಾರ ಹೆಣವಾಗಿ ಬಿದ್ದಿದ್ದಳು.ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಇದನ್ನು ಗಮನಿಸಿ ಪರಿಶೀಲಿಸಿದಾಗ ಆಕೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆಕೆಯ ಪತಿ ಚಂದ್ರು ಮನೆಯೊಳಗೆ ಮಲಗಿರುವುದು ಕಂಡು ಬಂದಿತ್ತು. ಪತಿ ಚಂದ್ರು ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು ಮನೆಯಿಂದ ಹೊರ ತಳ್ಳಿದ್ದಾನೆ.
ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಮಗಳು ವಿದ್ಯಾಭ್ಯಾಸ ಮೊಟಕುಗೊಳಿಸಿ ಮನೆಯಲ್ಲಿಯೇ ಇದ್ದು ಇನ್ನೋರ್ವ ಮಗಳು ಬೇಲೂರು ಹಾಸ್ಟೆಲ್ ನಲ್ಲಿ ಇದ್ದು ಹೈಸ್ಕೂಲ್ ವ್ಯಾಸಾಂಗ ಮಾಡುತ್ತಿದ್ದಾಳೆ ಎಂದು ತಿಳಿದುಬಂದಿದೆ. ಮಗಳು ಸಂಬಂಧಿಕರ ಮನೆಗೆ ತೆರಳಿದ್ದಳು. ಮನೆಯಲ್ಲಿ ಗಂಡ ಹೆಂಡತಿ ಇಬ್ಬರೇ ಇದ್ದರು ಎನ್ನಲಾಗಿದೆ. ಗೋಣಿಬೀಡು ಪೊಲೀಸರ ಭೇಟಿ ನೀಡಿ ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಹೊರನಾಡು ಬಳಿ ಎರಡು ವಾಹನಗಳ ಡಿಕ್ಕಿ
ಹೊರನಾಡು: ಹೊರನಾಡು ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ ಬರುವಾಗ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಎರಡು ಕಾರುಗಳ ಮುಂಭಾಗ ಜಖಂ ಆಗಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ತಕ್ಷವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಸುಂಕಸಾಲೆ ಬಳಿ ನಡೆದಿದೆ.
ಅಕ್ರಮ ಮದ್ಯ ಮಾರಾಟ: ಜನರ ಹೋರಾಟ
ಅಕ್ರಮ ಮದ್ಯ ಮಾರಾಟ ಮತ್ತು ಎಂ ಎಸ್ ಐ ಎಲ್ ಮಳಿಗೆಗೆ ಗ್ರಾಮ ಮಟ್ಟದಲ್ಲಿ ಅನುಮತಿ ಕೊಡುವುದನ್ನು ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗಡಿಕಲ್ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಹಾವಳಿಯಿಂದ ಗ್ರಾಮಸ್ಥರಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಗ್ರಾಮ ಮಟ್ಟದಲ್ಲಿ ಶಾಲೆಗಳು ತಲೆಯೆತ್ತಬೇಕಾದ ಈ ದಿನಗಳಲ್ಲಿ ನಮ್ಮನಾಳುವ ಸರ್ಕಾರಗಳು ಸಾವಿರಾರು ಸಾರಾಯಿ ಅಂಗಡಿಗಳಿಗೆ ಅನುಮತಿ ನೀಡುತ್ತಿದೆ. ಯುವಜನತೆ ಅಥವಾ ಊರಿನ ಜನ ಮದ್ಯಪಾನದಿಂದ ತನ್ನ ತನವನ್ನೇ ಕಳೆದುಕೊಂಡು ಮಾನಸಿಕ ಅಸ್ವಸ್ಥ ರಾಗತೊಡಗಿದ್ದಾರೆ. ದಿನಸಿ ಅಂಗಡಿಗಳಲ್ಲಿ, ಮನೆಗಳಲ್ಲಿ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.