ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಕೃಷಿಕ ಸಾವು..
– ತೋಟದ ಮರಗಸಿಗೆ ತಂದಿದ್ದ ಅಲ್ಯುಮ್ಯೂನಿಯಂ ಏಣಿ
– ಕೆಲವು ದಿನಗಳ ಹಿಂದಷ್ಟೇ ಮಗನಿಗೆ ಅಪಘಾತವಾಗಿತ್ತು
NAMMUR EXPRESS NEWS
ಚಿಕ್ಕಮಗಳೂರು: ತಾಲ್ಲೂಕಿನ ಅಲ್ಲೂರು ಸಮೀಪದ ಕೂದುವಳ್ಳಿ ಗ್ರಾಮದ ಕೃಷಿಕ ಕೆ. ಎಲ್. ಹೂವೇಗೌಡ ಇಂದು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ತೋಟದಲ್ಲಿ ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚಾನಕ್ಕಾಗಿ ಏಣಿ ತಗುಲಿ ಈ ಘಟನೆ ನಡೆದಿದೆ. ಇತ್ತೀಚಿಗಷ್ಟೇ ಹೂವೇಗೌಡರ ಮಗ ಟ್ಯಾಕ್ಟರ್ ಅಪಘಾತದಿಂದ ಗಂಭೀರ ಗಾಯಗಳಾಗಿದ್ದು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ತನ್ನ ಮಗ ಚೇತರಿಸಿಕೊಳ್ಳುತ್ತಿರುವ ಸಮಯದಲ್ಲಿಯೇ ತಂದೆ ವಿದ್ಯುತ್ ಸ್ಪರ್ಶದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ.
ಈ ಸಂಬಂಧ ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.