ಮತ್ತೆ ಒತ್ತುವರಿ ತೆರವು ವಿರುದ್ಧ ಹೋರಾಟ!
– ಶೃಂಗೇರಿಯಲ್ಲಿ ಬೃಹತ್ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ
– ಜೀವರಾಜ್ ನೇತೃತ್ವದಲ್ಲಿ ಪ್ರತಿಭಟನೆ
NAMMUR EXPRESS NEWS
ಶೃಂಗೇರಿ: ರಾಜ್ಯ ಸರ್ಕಾರದ ರೈತರ ಒತ್ತುವರಿ ತೆರವು ಆದೇಶ ವಿರೋಧಿಸಿ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಶೃಂಗೇರಿ ಕ್ಷೇತ್ರ ಬಂದ್ ಹಾಗೂ ಬೃಹತ್ ಪ್ರತಿಭಟನೆಯ ನಂತರವೂ ಸರ್ಕಾರ ರೈತರ ಒತ್ತುವರಿ ತೆರವಿಗೆ ಮುಂದಾಗಿರುವ ಸರ್ಕಾರದ ವಿರುದ್ಧ ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ವೇದಿಕೆ ಸಿದ್ದಗೊಂಡಿದೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಬೆಂಗಳೂರು ಇವರು ಎಲ್ಲಾ ಡಿಎಫ್ಓ ಗಳಿಗೆ ನೀಡಿದ ಆದೇಶ ಖಂಡಿಸಿ ಮಾಜಿ ಶಾಸಕ ಡಿ.ಎನ್ ಜೀವರಾಜ್ ಆಕ್ರೋಶ ವ್ಯಕ್ತಪಡಿಸಿ ಇಂದು ಆಗಸ್ಟ್ 26 ರ ಬೆಳಿಗ್ಗೆ 10:30 ಸೋಮವಾರದಂದು ಶೃಂಗೇರಿ ತಾಲೂಕು ಬಿಜೆಪಿ ನೇತೃತ್ವದಲ್ಲಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ತಾಲೂಕಿನ ಎಲ್ಲಾ ರೈತ ಬಾಂಧವರು,ರೈತ ಪರ ಸಂಘಟನೆಗಳು,ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕರೆ ನೀಡಿದರು. ಪ್ರತಿಭಟನಾ ಮೆರವಣಿಗೆ ಪ್ಟಣದ ುಖ್ಯ ಬಸ್ ನಿಲ್ದಾಣದಿಂದ ಪ್ರಾರಂಭಗೊಂಡು ಪ್ರಮುಖ ಬೀದಿಗಳಲ್ಲಿ ಸಾಗಿ ಸಂತೆ ಮಾರುಕಟ್ಟೆಯಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಶೃಂಗೇರಿ ತಾಲೂಕು ಬಿಜೆಪಿ ತಿಳಿಸಿದೆ.