ಕಾಫಿ ನಾಡಲ್ಲಿ ರಾಜ್ಯಪಾಲರ ವಿರುದ್ಧ ಹೋರಾಟ!
– ರಾಜಕೀಯ ದುರುದ್ದೇಶದಿಂದ ಪ್ರಾಸಿಕ್ಯೂಷನಿಗೆ ಅನುಮತಿ: ಖಂಡನೆ
– ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ತಾಲೂಕಲ್ಲಿ ಪ್ರತಿಭಟನೆ
NAMMUR EXPRESS NEWS
ಚಿಕ್ಕಮಗಳೂರು: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಪಕ್ಷಪಾತಿ ನಡೆಯನ್ನು ಖಂಡಿಸಿ ಹಾಗೂ ರಾಜಭವನವನ್ನು ಹಾಗೂ ಅಧಿಕಾರವನ್ನು ದುರುಪಯೋಗ ಪಡೆಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಚಿಕ್ಕಮಗಳೂರು, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತರೀಕೆರೆ, ಕಡೂರು, ಮೂಡಿಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಯಿತು.
ಶೃಂಗೇರಿ ಕ್ಷೇತ್ರದಲ್ಲಿ ಶಾಸಕ ರಾಜೇಗೌಡ ಇದ್ದರು. ಇನ್ನುಳಿದಂತೆ ಆಯಾ ಕ್ಷೇತ್ರದಲ್ಲಿ ಶಾಸಕರು, ನಾಯಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.