ಪಟಾಕಿ ಬ್ಯಾನ್ ಮಾಡಿದ್ರು ಮಾರಾಟ ಮಾಡಿದಕ್ಕೆ ದಾಳಿ
– ಚಿಕ್ಕಮಗಳೂರು:7.60 ಲಕ್ಷ ರೂ ಮೌಲ್ಯದ ಪಟಾಕಿ ವಶ: ದೂರು ದಾಖಲು
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮೂರು ಸ್ಥಳಗಳ ಗೋಡೌನ್ ಗಳಲ್ಲಿ ಪರವಾನಗಿ ಇಲ್ಲದೆ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಪಟಾಕಿ ಸಂಗ್ರಹಿಸಲಾಗಿದ್ದು ತಾಲೂಕು ಆಡಳಿತ ದಾಳಿ ಮಾಡಿ ವಶಪಡಿಸಿಕೊಂಡು ದೂರು ದಾಖಲಿಸಿದೆ. ಉಪ ವಿಭಾಗ ಅಧಿಕಾರಿ, ತಹಸಿಲ್ದಾರ್ ಮತ್ತು ಬಸವನಹಳ್ಳಿ ಹಾಗೂ ನಗರ ಠಾಣೆ ಪಿ.ಎಸ್.ಐ, ಸಿಬ್ಬಂದಿ ಹಾಗೂ ಅಗ್ನಿಶಾಮಕ ಇಲಾಖೆಯ ಸಹಯೋಗದೊಂದಿಗೆ ಈ ದಾಳಿ ನಡೆಸಲಾಗಿದೆ. ಹಾಲೇನಹಳ್ಳಿ ವಿಜಯದುರ್ಗ ದೇವಸ್ಥಾನದ ಒಳಭಾಗದಲ್ಲಿರುವ ಗೋಡೌನ್ ನಲ್ಲಿ 4 ಲಕ್ಷ ಮೌಲ್ಯದ 1000 ಕೆಜಿ ಪಟಾಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಶರೀಫ್ ಗಲ್ಲಿ ಗೋಡೌನ್ 3,50000/- ರೂ ಮೌಲ್ಯದ 684 ಕೆಜಿ ಪಟಾಕಿ ಹಾಗೂ ನಗರದ ಬಿ.ಎಮ್ ರಸ್ತೆ ಮಂಜುನಾಥ ಸ್ವಾಮಿ ಸ್ಟೋರ್ಸ್ ನಲ್ಲಿ 10000/- ರೂ ಮೌಲ್ಯದ 25 ಕೆಜಿ ಪಟಾಕಿ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.