ಭ್ರಷ್ಟರು, ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜು
– ಭಾರತೀಯ ಮಾನವ ಹಕ್ಕುಗಳ ಸಂಸ್ಥೆ ಯಿಂದ ಶೃಂಗೇರಿಯಲ್ಲಿ ಮಾನವ ಹಕ್ಕುಗಳ ದಿನ ಆಚರಣೆ
– ರಾಜ್ಯಾಧ್ಯಕ್ಷ ನಾರಾಯಣ ಈಳಿಗೇರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ
– ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಂಸ್ಥೆ ಪದಾಧಿಕಾರಿಗಳು
NAMMUR EXPRESS NEWS
ಶೃಂಗೇರಿ: ಶೃಂಗೇರಿ ತಾಲೂಕಿನಲ್ಲಿ ಮಾನವ ಹಕ್ಕುಗಳ ದಿನ ಆಚರಣೆಯನ್ನು ಭಾರತೀಯ ಮಾನವ ಹಕ್ಕುಗಳ ಸಂಸ್ಥೆಯಿಂದ ಶೃಂಗೇರಿ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸ್ಥೆಯ ರಾಜ್ಯಾಧ್ಯಕ್ಷರಾದ ನಾರಾಯಣ ಈಳಿಗೇರರವರ ಅಧ್ಯಕ್ಷತೆ ವಹಿಸಿದ್ದರು, ರಾಜ್ಯ ಉಪಾಧ್ಯಕ್ಷರಾದ ಜೆ.ಗಿರಿಧರ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾನೂನಿನಡಿಯಲ್ಲಿ ಮಾನವ ಹಕ್ಕುಗಳ ರಕ್ಷಣೆ ಮಾಡುವಂತೆ,ಸಮಾಜದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿ ಸಂವಿಧಾನ, ಕಾನೂನಿನಡಿಯಲ್ಲಿ ಶುದ್ಧ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಎಲ್ಲಾ ಪದಾಧಿಕಾರಿಗಳಿಗೆ ಕರೆ ನೀಡಿದರು. ಸಮಾಜದಲ್ಲಿನ ಭ್ರಷ್ಟಾಚಾರ,ಮಾನವ ಹಕ್ಕುಗಳ ಉಲ್ಲಂಘನೆಗಳ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಿ ನೊಂದವರಿಗೆ ನ್ಯಾಯ ಒದಗಿಸಲು ಸಂಸ್ಥೆ ಸದಾಕಾಲ ಸಿದ್ಧವಿದೆ ಯಾರೂ ಹೆದರದೇ ಕಾನೂನಿನಡಿಯಲ್ಲಿ ಸಂವಿಧಾನ, ಮಾನವ ಹಕ್ಕುಗಳ ರಕ್ಷಣೆ ಮಾಡುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶೃಂಗೇರಿ ಘಟಕದ ಅಧ್ಯಕ್ಷರಾದ ಮೋಹನ್ ಸೇರಿದಂತೆ ತಾಲೂಕಿನ ಎಲ್ಲಾ ಪದಾಧಿಕಾರಿಗಳು ಹಾಗೂ ವಿವಧ ಜಿಲ್ಲೆಗಳಿಂದ ಆಗಮಿಸಿದ ಪದಾಧಿಕಾರಿಗಳು ಉಪಸ್ಥಿತರಿದ್ದರು.