Categories
ಚಿಕ್ಕಮಗಳೂರು

ಕಟ್ಟಡ ಕಾರ್ಮಿಕರು ಮತ್ತು ಅವರ ಕುಟಂಬಕ್ಕೆ ಆರೋಗ್ಯ ತಪಾಸಣೆ

ಕಟ್ಟಡ ಕಾರ್ಮಿಕರು ಮತ್ತು ಅವರ ಕುಟಂಬಕ್ಕೆ ಆರೋಗ್ಯ ತಪಾಸಣೆ

* ಕಾರ್ಮಿಕ ಇಲಾಖೆವತಿಯಿಂದ ಶಿಬಿರ ಆಯೋಜನೆ
* ಜಿಲ್ಲಾಧ್ಯಕ್ಷ ಜೈರಾಮ್ ಸಜಿತ್ ಹಾಗೂ ತಾಲೂಕು ಅಧ್ಯಕ್ಷ ರಮೇಶ್ ನೇತೃತ್ವದಲ್ಲಿ ಶಿಬಿರ

NAMMMUR EXPRESS NEWS
ಶೃಂಗೇರಿ: ತಾಲೂಕಿನ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಮಿಕ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮವು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟ ಚಿಕ್ಕಮಗಳೂರು ಇದರ ಜಿಲ್ಲಾಧ್ಯಕ್ಷ ಜೈರಾಮ್ ಸಜಿತ್ ಹಾಗೂ ಕಾರ್ಮಿಕ ಮಿತ್ರ ಬಳಗ ಶೃಂಗೇರಿ ಇದರ ತಾಲೂಕು ಅಧ್ಯಕ್ಷರಾದ ರಮೇಶ್ ಎಸ್ ಎಮ್ ಇವರ ನೇತೃತ್ವದಲ್ಲಿ ನಗರದ ಸರ್ಕಾರಿ ಫ್ರೌಢಶಾಲೆ,ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಕನ್ನಡ ಭವನದಲ್ಲಿ ನೆರವೇರಿತು. ಶಿಬಿರದಲ್ಲಿ ಲೇಬರ್ ಕಾರ್ಡ್ ಹೊಂದಿದ ಕಾರ್ಮಿಕರೆಲ್ಲರೂ ತಮ್ಮ ಕುಟುಂಬ ಸದಸ್ಯರೊಂದಿಗೆ ಆಗಮಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ವೈದ್ಯ ಸಚಿನ್ ನೇತೃತ್ವದ ತಂಡದಿಂದ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರು ಹಾಗೂ ಕಾರ್ಮಿಕರ ಮಕ್ಕಳಿಗೆ ಸಿಗುವ ಸೌಲಭ್ಯದ ಕುರಿತು ಕಟ್ಟಡ ಮತ್ತು ಇತರೆ ನಿರ್ಮಾಣ ಅಸಂಘಟಿತ ಕಾರ್ಮಿಕರ ಒಕ್ಕೂಟ ಚಿಕ್ಕಮಗಳೂರು ಜಿಲ್ಲೆ ಇದರ ಜಿಲ್ಲಾಧ್ಯಕ್ಷರಾದ ಸಜಿತ್ ರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ಫ್ರೌಢಶಾಲೆಯ ಪ್ರಾಂಶುಪಾಲರು ಹಾಗೂ ಕಾರ್ಮಿಕ ಮಿತ್ರ ಬಳಗದ ತಾಲೂಕು ಅಧ್ಯಕ್ಷರಾದ ರಮೇಶ್ ಶೂನ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.