ಕಾಫಿನಾಡಿಗೆ ಭಾರೀ ಮಳೆಯ ಮುನ್ಸೂಚನೆ
* ಇಂದು ಆರೆಂಜ್,ನಾಳೆ – ನಾಡಿದ್ದು ರೆಡ್ ಅಲರ್ಟ್
* ಕಂಟ್ರೋಲ್ ರೂಂ ತೆರೆದ ಜಿಲ್ಲಾಡಳಿತ,ಸಾರ್ವಜನಿಕರೇ ಎಚ್ಚರ
NAMMMUR EXPRESS NEWS
ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಗುರುವಾರದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಹವಾಮಾನ ಇಲಾಖೆ ಜಿಲ್ಲೆಗೆ ಇಂದು (ಗುರುವಾರ) ಆರೆಂಜ್ ಅಲರ್ಟ್, ನಾಳೆ ಮತ್ತು ನಾಡಿದ್ದು ರೆಡ್ ಅಲರ್ಟ್ ಘೋಷಣೆ ಮಾಡಿದೆ, ಇದರ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಜಿಲ್ಲಾಡಳಿತ ಕಂಟ್ರೋಲ್ ರೂಂ ತೆರೆದಿದ್ದು ಅಗತ್ಯ ಬಿದ್ದರೆ ಕರೆ ಮಾಡುವಂತೆ ಸೂಚನೆ ನೀಡಿದೆ, ಜೊತೆಗೆ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಜನರು ಹಳ್ಳ, ನದಿ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಜೊತೆಗೆ ಜಾನುವಾರು, ಬಟ್ಟೆ ತೊಳೆಯಲು ಹಳ್ಳ-ಕೆರೆಕಟ್ಟೆ ಬಳಿ ಹೋಗದಂತೆ ಸೂಚನೆ ನೀಡಿದೆ.
ಧರೆ, ಗುಡ್ಡ ಕುಸಿಯುವ ಸಾಧ್ಯತೆಯಿದ್ದು ಜನರು ಎಚ್ಚರಿಕೆಯಿಂದಿರಬೇಕು ಎಂದು ತನ್ನ ಪ್ರಕಟಣೆಯಲ್ಲಿ ಸೂಚಿಸಿದೆ.
ಕಂಟ್ರೋಲ್ ರೂಂ ನಂಬರ್ – 08262 238950
