ಮಲೆನಾಡ ಕೆಲವು ಕಡೆ ರಜೆ ಘೋಷಣೆ!
– ಚಿಕ್ಕಮಗಳೂರು ತಾಲೂಕಿನ ಆಯ್ದ ಭಾಗದ ಶಾಲೆಗಳಿಗೆ ರಜೆ ಘೋಷಣೆ
– ಮಲೆನಾಡಲ್ಲಿ ಮುಂದುವರಿದ ಮಳೆ ಅಬ್ಬರ
– ತುಂಬಿ ಹರಿಯುತ್ತಿರುವ ನದಿಗಳು!:ಎಚ್ಚರ ಎಚ್ಚರ
NAMMUR EXPRESS NEWS
ಚಿಕ್ಕಮಗಳೂರು; ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರಿ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಕಳಸ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ರಜೆ?: ಚಿಕ್ಕಮಗಳೂರು ತಾಲೂಕಿನ ಜಾಗರ, ವಸ್ತಾರೆ, ಖಾಂಡ್ಯ, ಆಲ್ಲೂರು ಹಾಗೂ ಆವತಿ ಹೋಬಳಿಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹೋಗಲು ತೊಂದರೆಯಾಗುತ್ತಿದ್ದು ಹಾಗೂ ಹಲವು ಶಾಲೆಯ ಕಟ್ಟಡಗಳು, ಹಳೆಯದಾಗಿದ್ದು, ದುರಸ್ತಿ ಅಗತ್ಯವಿರುತ್ತದೆ. ಈ ಸಂಬಂಧ ಮುಂಜಾಗ್ರತ ಕ್ರಮವಾಗಿ ಶುಕ್ರವಾರ ಮೇಲ್ಕಂಡ ಶಾಲೆಗಳಿಗೆ ರಜೆ ಘೋಷಿಸಿ ಬಿಇಓ ಆದೇಶ ಹೊರಡಿಸಿದ್ದಾರೆ.
ತುಂಬಿ ಹರಿಯುತ್ತಿರುವ ನದಿಗಳು!: ಭದ್ರಾನದಿಯಲ್ಲಿ ಒಳ ಹರಿವಿನಲ್ಲಿ ಹೆಚ್ಚಳವಾಗಿದ್ದು, ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಭದ್ರಾನದಿ ಸೇರಿದಂತೆ ಹೋಬಳಿ ಬಹುತೇಕ ಹಳ್ಳಕೊಳ್ಳಗಳೂ ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಭದ್ರಾನದಿಯಲ್ಲಿ ನೀರಿನ ಹರಿವು ಹೆಚ್ಚಿದ ಪರಿಣಾಮ ಚಿಕ್ಕಮಗಳೂರಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಹರಿವಿನ ಮಟ್ಟದಲ್ಲಿ ಹೆಚ್ಚಳವಾಗಿದೆ. ಇನ್ನು ಶೃಂಗೇರಿ ಸೇರಿ ಹಲವೆಡೆ ತುಂಗಾ ನದಿ ನೀರು ಹೆಚ್ಚಳ ಆಗಿದೆ.
ಕಳಸ, ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.
ಇದನ್ನೂ ಓದಿ : ಅಡಿಕೆ ದರ ಎಷ್ಟಿದೆ..ಕಾಳು ಮೆಣಸು ದರ ಎಷ್ಟು?
HOW TO APPLY : NEET-UG COUNSELLING 2023