Categories
ಚಿಕ್ಕಮಗಳೂರು

ಭೀಕರ ಅಪಘಾತಕ್ಕೆ ಪತಿ -ಪತ್ನಿ ಬಲಿ!

ಭೀಕರ ಅಪಘಾತಕ್ಕೆ ಪತಿ -ಪತ್ನಿ ಬಲಿ!
– ಚಿಕ್ಕಮಗಳೂರಲ್ಲಿ ಶಿವಮೊಗ್ಗ ದಂಪತಿಗಳ ದುರ್ಮರಣ
– ಒಂದು ವರ್ಷದ ಮಗು ಸ್ಥಿತಿ ಗಂಭೀರ
– ಚಿಕ್ಕಮಗಳೂರಲ್ಲಿ ದಿನೇ ದಿನೇ ಅಪಘಾತ ಹೆಚ್ಚಳ

NAMMUR EXPRESS NEWS
ಚಿಕ್ಕಮಗಳೂರು: ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಭೀಕರ ಸರಣಿ ಅಪಘಾತದಲ್ಲಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಮಂಗಳವಾರ ತಡ ರಾತ್ರಿ ಸಂಭವಿಸಿದೆ.
ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಅಪಘಾತದಲ್ಲಿ ಸಾವು ಕಂಡಿದ್ದು ದಂಪತಿಯ 1 ವರ್ಷದ ಮಗುವಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿರುವಾಗ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.