ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪತಿ
* ಪತ್ನಿ ಕೊಂದು ತಲೆಮರೆಸಿಕೊಂಡಿದ್ದ ಪತಿ ಮುಳ್ಳಯ್ಯನಗಿರಿಯಲ್ಲಿ ಬಂಧನ
* ದಂಪತಿಗಳ ಜಗಳಕ್ಕೆ ಎರಡೂವರೆ ವರ್ಷದ ಮಗು ಅನಾಥ
NAMMMUR EXPRESS NEWS
ಚಿಕ್ಕಮಗಳೂರು: ತಾಲೂಕಿನ ಕೈಮರ ಗ್ರಾಮದಲ್ಲಿ ಕೀರ್ತಿ (26) ಎಂಬ ಯುವತಿಯನ್ನು ಅವಿನಾಶ್ ಎನ್ನುವ ವ್ಯಕ್ತಿ ಸುಮಾರು 4 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಾನೆ ಮತ್ತು ಇವರಿಬ್ಬರಿಗೆ ಎರಡೂವರೆ ವರ್ಷದ ಮಗುವಿದೆ. ಆದರೆ ಕಳೆದ ಕೆಲ ದಿನಗಳಿಂದ ದಂಪತಿ ನಡುವೆ ಜಗಳ ಬರಲು ಶುರುವಾಗಿದೆ. ಈ ಜಗಳ ವಿಕೋಪಕ್ಕೆ ಹೋಗಿ ಅವಿನಾಶ್ ತನ್ನ ಪತ್ನಿ ಕೀರ್ತಿಯನ್ನು ಚಾಕುವಿನಿಂದ ಇರಿದು ಕೊಂದು ಪರಾರಿಯಾಗಿದ್ದ ಈ ಸಂಬಂಧ ಕೀರ್ತಿಯ ಸಂಬಂಧಿಕರು ಅರೋಪಿಸಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
* ಆರೋಪಿ ಮುಳ್ಳಯ್ಯನಗಿರಿಯಲ್ಲಿ ಅರೆಸ್ಟ್
ಪತ್ನಿಯನ್ನ ಕೊಂದು ನಾಪತ್ತೆಯಾಗಿದ್ದ ಪತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅವಿನಾಶ್(32) ಬಂಧಿತ ಆರೋಪಿ. ಬುಧವಾರ ಬೆಳಗ್ಗೆ ಇವರಿಬ್ಬರ ಮಧ್ಯೆ ಜಗಳ ಏರ್ಪಟ್ಟು, ಪತ್ನಿ ಕೀರ್ತಿಯನ್ನ ಅವಿನಾಶ್ ಚಾಕುವಿನಿಂದ ಹತ್ತಕ್ಕೂ ಹೆಚ್ಚು ಬಾರಿ ಇರಿದಿದ್ದ.
ಪತಿಯಿಂದ ಚಾಕು ಇರಿತಕ್ಕೊಳಗಾದ ಕೀರ್ತಿ ರಕ್ತದ ಮಡುವಿನಲ್ಲೇ ಮನೆಯಿಂದ ಓಡಿ ಬಂದು ನಡು ರಸ್ತೆಯಲ್ಲಿ ಕೂಗಿಕೊಂಡು ಬಿದ್ದಿದ್ದಳು. ಕೂಡಲೇ ಆಕೆಯನ್ನು ಪೋಷಕರು ಹಾಗೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅವಿನಾಶ್, ಮನಸೋ ಇಚ್ಛೆ ಚಾಕುವಿನಿಂದ ಹಲ್ಲೆ ಮಾಡಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು.ಕೀರ್ತಿಗೆ ಚಾಕುವಿನಿಂದ ಇರಿದ ಅವಿನಾಶ್, ಬಳಿಕ ಮುಳ್ಳಯ್ಯನಗಿರಿ ಕಾಡಿನಲ್ಲಿ ನಾಪತ್ತೆಯಾಗಿದ್ದ. ಆತನ ಬಂಧನಕ್ಕಾಗಿ ಚಿಕ್ಕಮಗಳೂರು ಎಸ್ಪಿ ವಿಕ್ರಂ ಆಮ್ಟೆ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ಹಾಗೂ ಸಬ್ ಇನ್ಸ್ಪೆಕ್ಟರ್, ರಾಜೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿದ್ದರು.
ಘಟನೆ ನಡೆದ ಏಳರಿಂದ ಎಂಟು ಗಂಟೆಗಳ ಕಾಲ ಮುಳ್ಳಯ್ಯನಗಿರಿ ಕಾಡಿನಲ್ಲಿ ಅವಿತು ಕೂತಿದ್ದ ಆರೋಪಿ ಅವಿನಾಶ್‌ನನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
