Categories
ಚಿಕ್ಕಮಗಳೂರು

ಎತ್ತಿನ ಭುಜಕ್ಕೆ ಟ್ರಕಿಂಗ್ ಪ್ಲಾನ್ ಮಾಡಿದ್ರೆ ದಯವಿಟ್ಟು ಮುಂದೂಡಿ !

ಎತ್ತಿನ ಭುಜಕ್ಕೆ ಟ್ರಕಿಂಗ್ ಪ್ಲಾನ್ ಮಾಡಿದ್ರೆ ದಯವಿಟ್ಟು ಮುಂದೂಡಿ !

* ಜು.31 ರವರೆಗೆ ಚಾರಣಿಗರಿಗೆ ಎತ್ತಿನ ಭುಜಕ್ಕೆ ನಿರ್ಬಂಧ ಅರಣ್ಯ ಇಲಾಖೆ
* ಪ್ರವಾಸಿಗರ ಸುರಕ್ಷತೆಯ ದೃಷ್ಠಿಯಿಂದ ತಾತ್ಕಾಲಿಕ ನಿರ್ಬಂಧ

NAMMMUR EXPRESS NEWS
ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಬಹುತೇಕ ಇಳಿಮುಖವಾದರೂ ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಸುರಿಯುತ್ತಿದೆ. ಪ್ರವಾಸಿ ತಾಣಗಳಲ್ಲಿ ಬೆಟ್ಟ ಗುಡ್ಡಗಳು ಕುಸಿಯೋದು, ಮರಗಳು ಮುರಿದು ಬೀಳೋದು ಇನ್ನೂ ನಿಂತಿಲ್ಲ. ಹಾಗಾಗಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜ ಚಾರಣಕ್ಕೆ ಅರಣ್ಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿದೆ.
ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಈ ಸಂಬಂಧ ಆದೇಶ ಹೊರಡಿಸಿದ್ದು, ಇಂದಿನಿಂದ ಜುಲೈ 31ರ ವರೆಗೆ ಚಾರಣವನ್ನು ನಿರ್ಭಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಮುಂದುವರೆದಿರುವ ಜೊತೆಗೆ ಈ ಪ್ರದೇಶದಲ್ಲಿ ವ್ಯಾಪಕ ಮಂಜುಕವಿದಿರುತ್ತದೆ. 7 ಕಿ.ಮೀ. ಚಾರಣದ ಮೂಲಕ ಎತ್ತಿನಭುಜ ತಲುಪಬೇಕಾಗುತ್ತದೆ. ಧಾರಕಾರ ಮಳೆಯಾಗುತ್ತಿರುವುದರಿಂದ ರಸ್ತೆಗಳು ಜಾರುತ್ತಿದ್ದು, ಕೆಲ ಮರಗಳು ಬೀಳುವ ಸ್ಥಿತಿಯಲ್ಲಿವೆ ಅಲ್ಲದೇ ಇಲ್ಲಿ ಕಾಡು ಪ್ರಾಣಿಗಳು ಹೆಚ್ಚಾಗಿರುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು ಈ ಎಲ್ಲಾ ಕಾರಣದಿಂದ ಇಂದಿನಿಂದ ಒಂದು ತಿಂಗಳ ಕಾಲ ಚಾರಣ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಡಿಎಫ್‌ಓ ತಿಳಿಸಿದ್ದಾರೆ.

* ಪ್ರವಾಸಿಗರ ಮನವರಿಕೆಗೆ ಹೆಚ್ಚಿನ ಸಿಬ್ಬಂದಿ ನಿಯೋಜನೆ
ಈ ಬಗ್ಗೆ ಪ್ರವಾಸಿಗರಿಗೆ ಮನವರಿಕೆ ಮಾಡಲು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ.ಪ್ರವಾಸಿಗರ ಸುರಕ್ಷತೆಗೆ ಪ್ರಾಮುಖ್ಯತೆ ನೀಡಿರುವ ಅರಣ್ಯ ಇಲಾಖೆಯ ಈ ಕ್ರಮಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಈ ಭಾಗದಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಕಳೆದ ಕೆಲ ದಿನಗಳಿಂದ ಒತ್ತಾಯ ಕೇಳಿಬಂದಿತ್ತು.
ಆದ್ದರಿಂದ ಚಾರಣಿಗರೇನಾದರೂ ಈ ಸಮಯದಲ್ಲಿ ಎತ್ತಿನ ಭುಜಕ್ಕೆ ಚಾರಣ ಹೋಗುವ ಪ್ಲಾನ್ ಮಾಡಿದ್ದರೆ ದಯವಿಟ್ಟು ಅದನ್ನು ಮುಂದೂಡಿ ಸಹಕರಿಸಿ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.