ಶೃಂಗೇರಿಯಲ್ಲಿ ವಿಶ್ವಯೋಗ ದಿನ ಆಚರಣೆ
* ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಮತ್ತು ಹಿಂದೂ ಸೇವಾ ಪ್ರತಿಷ್ಠಾನದಿಂದ ಆಯೋಜನೆ
* ಒಂದು ಭೂಮಿ,ಒಂದು ಆರೋಗ್ಯ ಎಂಬ ಧ್ಯೇಯ ವಾಕ್ಯದಡಿ ಕಾರ್ಯಕ್ರಮ ಆಯೋಜನೆ
NAMMMUR EXPRESS NEWS
ಶೃಂಗೇರಿ: ತಾಲೂಕಿನ ಕನ್ನಡ ಭವನದಲ್ಲಿ ಪಂತಜಲಿ ಯೋಗ ಶಿಕ್ಷಣ ಸಂಸ್ಥೆ ಹಾಗೂ ಹಿಂದೂ ಸೇವಾ ಪ್ರತಿಷ್ಠಾನ ಶೃಂಗೇರಿ ವತಿಯಿಂದ 11 ನೇ ವಿಶ್ವ ಯೋಗದಿನವನ್ನು ಆಚರಿಸಲಾಯಿತು.
ಬೆಳಿಗ್ಗೆ 5:30 ಕ್ಕೆ ಆರಂಭವಾದ ಕಾರ್ಯಕ್ರಮವನ್ನು ಶೃಂಗೇರಿ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೆಚ್.ಎಸ್ ವೇಣುಗೋಪಾಲ್ ಉದ್ಘಾಟಿಸಿದರು. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಶೃಂಗೇರಿಯ ಪ್ರಧಾನ ಸಂಚಾಲಕರಾದ ನಾಗೇಶ್ ಕಾಮತ್‌ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ಪ್ರಕಾಶ್ ಎಂ.ಎಲ್,ಮಾಜಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಡಾ.ಬಿ ಶಿವಶಂಕರ್,ಹಿಂದೂ ಸೇವಾ ಪ್ರತಿಷ್ಠಾನದ ಪರವಾಗಿ ಶಂಕರ್ ನಾರಾಯಣ್,ನೂತನ್ ಸೂರ್ಯ,ಸಂಸ್ಥೆಯ ಸದಸ್ಯರು,ಸಾರ್ವಜನಿಕರು ಭಾಗವಹಿಸಿದರು.
ಒಂದು ಭೂಮಿ ಒಂದು ಆರೋಗ್ಯ ಎಂಬ ಧ್ಯೇಯ ವಾಕ್ಯದಡಿ ಈ ಬಾರಿಯ ಯೋಗದಿನ ಕಾರ್ಯಕ್ರಮವನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು. ಎಲ್ಲರೂ ಯೋಗವನ್ನು ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಯೋಗದ ಬಗ್ಗೆ ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸಬೇಕೆಂದು ಸಂಕಲ್ಪ ಮಾಡಲಾಯಿತು.
