ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಕಾಫಿನಾಡು ಬಂದ್‌ಗೆ ಕರೆ
* ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಪ್ರತಿಭಟನೆಗೆ ಕರೆ
* ಇಂದು ಆಲ್ದೂರ್ ಬಂದ್
NAMMMUR EXPRESS NEWS
ಚಿಕ್ಕಮಗಳೂರು: ಹಿಂದೂ ಕಾರ್ಯಕರ್ತ ಬಜ್ಪೆ ಸಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಹತ್ಯೆಯನ್ನು ಖಂಡಿಸಿ ಹಾಗೂ ಪೆಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ದಾಳಿಯನ್ನು ಖಂಡಿಸಿ ಸೋಮವಾರ ದಿನಾಂಕ 05:05:2025 ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಚಿಕ್ಕಮಗಳೂರು ಜಿಲ್ಲಾ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕರೆ ನೀಡಿದೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಈಗಾಗಲೇ ಪ್ರಕರಣ ಸಂಬಂಧ ಎಂಟು ಜನರನ್ನು ಪೋಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಇದರಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಇಬ್ಬರು ಯುವಕರು ಸೇರಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪೋಲಿಸ್ ಇಲಾಖೆ ಜಿಲ್ಲೆಯಾದ್ಯಂತ ಎಚ್ಚರ ವಹಿಸಿದೆ.
* ಹತ್ಯೆ ಖಂಡಿಸಿ ಇಂದು ಆಲ್ದೂರು ಬಂದ್
ಪೆಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ದಾಳಿ ಹಾಗೂ ಮಂಗಳೂರಿನಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಇಂದು ಆಲ್ದೂರು ಪಟ್ಟಣ ಬಂದ್‌ಗೆ ಕರೆ ನೀಡಿದೆ.
ಬೆಳಿಗ್ಗೆ 6:00 ಯಿಂದ ಸಂಜೆ 6:00 ವರೆಗೆ ಬಂದ್ ನಡೆಯಲಿದ್ದು, ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಸ್ಥಳೀಯರು ಬಂದ್‌ಗೆ ಬೆಂಬಲ ನೀಡಿದ್ದಾರೆ. ಸದಾ ಜನರಿಂದ ತಂಬಿರುವ ಆಲ್ದೂರು ಪಟ್ಟಣ ಇಂದು ಬಂದ್ ಹಿನ್ನೆಲೆ ಸಂಪೂರ್ಣ ಸ್ತಬ್ಧವಾಗಿದೆ. ವಾರದ ಸಂತೆಯನ್ನೂ ರದ್ದು ಮಾಡಿ ಬಂದ್‌ಗೆ ಬೆಂಬಲ ನೀಡಿದ್ದಾರೆ.
