Categories
ಚಿಕ್ಕಮಗಳೂರು

ಕೌರಿ ಪೃಥ್ವಿ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ

ಕೌರಿ ಪೃಥ್ವಿ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ
– ಸಮಾಜ ಸೇವೆ, ಮೋಟಾರ್ ಸ್ಪೋರ್ಟ್ಸ್ ಕ್ಷೇತ್ರದಲ್ಲಿ ಸೇವೆ
– ಕೊಪ್ಪದಲ್ಲಿ ಯುವ ಸಂಘಟನೆಯಲ್ಲಿ ಮೇಲುಗೈ
– ವಿಜಯ ಕರ್ನಾಟಕದ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವ

ಕೊಪ್ಪ: ಕೊಪ್ಪ ಯುವ ಒಕ್ಕಲಿಗರ ಸಂಘದ ಅಧ್ಯಕ್ಷರು, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರು, ಕೊಪ್ಪ ಸ್ಪೋರ್ಟ್ಸ್ ಕ್ಲಬ್ ಟ್ರಸ್ಟ್ ಪ್ರಮುಖರು, ಪ್ರಗತಿ ಪರ ಕೃಷಿಕರು, ಯುವ ಸಂಘಟಕರು ಆದ ಪೃಥ್ವಿರಾಜ್ ಕೌರಿ ಅವರು ವಿಜಯ ಕರ್ನಾಟಕ ಕೊಡ ಮಾಡುವ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕೊಪ್ಪದ ಯುವ ಒಕ್ಕಲಿಗ ಸಂಘ ಹಾಗೂ ಕೊಪ್ಪ ಸ್ಪೋರ್ಟ್ಸ್ ಕ್ಲಬ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಸರ್ಕಾರಿ ಶಾಲೆಗಳಿಗೆ ವಿವಿಧ ವಸ್ತು ನೀಡುವ ಮೂಲಕ ಮಾದರಿ ಹೆಜ್ಜೆ ಇಟ್ಟಿದ್ದು ಸಮಾಜ ಸೇವೆ, ಮೋಟಾರ್ ಸ್ಪೋರ್ಟ್ಸ್ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಸಾಧನೆ ಮಾಡಿದ್ದಾರೆ. ಅಲ್ಲದೆ ತಂದೆ ಪ್ರಕಾಶ್ ಕೌರಿ ಅವರ ಹಾದಿಯಲ್ಲೇ ಸಮಾಜ ಸೇವೆ, ದಾನ ಧರ್ಮದ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೃಹತ್ ಕೈಗಾರಿಕಾ ಸಚಿವರು ಈ ಪ್ರಶಸ್ತಿಯನ್ನು ವಿತರಣೆ ಮಾಡಿದ್ದು ಪೃಥ್ವಿರಾಜ್ ಅವರ ಕುಟುಂಬ ಹಾಗೂ ಸ್ನೇಹಿತರು ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಹಾಜರಿದ್ದು ಶುಭ ಕೋರಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.