Categories
ಚಿಕ್ಕಮಗಳೂರು

ಕೊಪ್ಪ: ಜ.19ಕ್ಕೆ ಉಚಿತ ಕಿವಿಯ ಶ್ರವಣ ತಪಾಸಣೆ

ಕೊಪ್ಪ: ಜ.19ಕ್ಕೆ ಉಚಿತ ಕಿವಿಯ ಶ್ರವಣ ತಪಾಸಣೆ
– ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಕಾರ್ಯಕ್ರಮ
– ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ

NAMMUR EXPRESS NEWS
ಕೊಪ್ಪ: ನವಚೈತ್ರ ಸಾಂಸ್ಕೃತಿಕ ವೇದಿಕೆ, ಕೊಪ್ಪ, ಕೊಪ್ಪ ತಾಲ್ಲೂಕು ವರ್ತಕರ ಸಂಘ, ಕೊಪ್ಪ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಲೆ ಸಹಯೋಗದೊಂದಿಗೆ ಉಚಿತ ಕಿವಿಯ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣೆ ನಡೆಯಲಿದೆ. ತೋಮರಶೆಟ್ಟಿ ಸ್ಮಾರಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ. ಕೆಳಪೇಟೆ, ಕೊಪ್ಪದಲ್ಲಿ ಜ. 19ಕ್ಕೆ ಭಾನುವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಅಯೋಜಿಸಲಾಗಿದೆ. ಟೀಮ್ ಈಶ್ವರ್ ಮಲ್ಪೆಯವರು ಅನೇಕ ಸಾಮಾಜಿಕ ಕಾರ್ಯವನ್ನು ಮುಂದುವರಿಸಿಕೊಂಡು ಬರುತ್ತಿದ್ದು ಈಗ ವಿಘ್ನಹರ್ತ ಶ್ರವಣ ಚಿಕಿತ್ಸಾಲಯ ಸಹಯೋಗದೊಂದಿಗೆ ಶ್ರವಣದ ಸಮಸ್ಯೆಯಿಂದ (ಕೇಳಿಸಿಕೊಳ್ಳುವ ಸಮಸ್ಯೆ) ಬಳಲುತ್ತಿರುವ ರೋಗಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಉಚಿತ ಶಿಬಿರವನ್ನು ಮಾಡುತ್ತಿದ್ದು ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಸಂಸ್ಥೆಯಾದ ಟೀಮ್ ಈಶ್ವರ್ ಮಲ್ಲೆಯವರು ಶ್ರವಣದ ಯಂತ್ರಕ್ಕೆ (Hearing Machine) ಆಗುವ ವೆಚ್ಚದ ಶೇಕಡಾ 40% ಮೊತ್ತವನ್ನು ಭರಿಸಲಾಗುತ್ತಿದ್ದು ರೋಗಿಗಳು ಇವರ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗೆ 9902344399, 7795144239, 9448719133 ಸಂಪರ್ಕಿಸಿ. ಸಾರ್ವಜನಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.