ಬಿಎಸ್ಎನ್ಎಲ್ ಗ್ರಾಹಕರ ಸಮಸ್ಯೆಗೆ ಸ್ಪಂದಿಸಿದ ಕೋಟಾ
* ಶೃಂಗೇರಿ ಕ್ಷೇತ್ರದ ಬಿಎಸ್‌ಎನ್‌ಎಲ್ ಸಮಸ್ಯೆ ಬಗ್ಗೆ ಅಧಿಕಾರಗಳ ಸಭೆ
* ಬಳಕೆದಾರರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ
NAMMMUR EXPRESS NEWS
ಶೃಂಗೇರಿ: ಬಿಎಸ್ಎನ್‌ಎಲ್ ಸಮಸ್ಯೆಗೆ ಸ್ಪಂದಿಸಿದ ಉಡುಪಿ – ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಇಂದು ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಬಿಎಸ್‌ಎನ್ಎಲ್ ಅಧಿಕಾರಿಗಳು ಹಾಗೂ ಬಳಕೆದಾರರೊಂದಿಗೆ ಸಭೆ ನಡೆಸಿ, ಆಗುತ್ತಿರುವ ಸಮಸ್ಯೆ ಪರಿಹರಿಸಲು ಚರ್ಚಿಸಿದರು. ಕಳೆದೆರಡು ದಿನಗಳ ಹಿಂದಷ್ಟೇ ಶೃಂಗೇರಿ ತಾಲೂಕಿನ ಬುಕ್ಕಡಿಬೈಲ್ ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದರು. ಈ ವಿಷಯ ತಿಳಿದ ಸಂಸದ ಕೂಡಲೇ ಸಭೆ ಕರೆದು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಒಂದು ವಾರ ಗಡವು ನೀಡಿದರು.
ಗ್ರಾಹಕರಿಗೆ ಸುಗಮ ದೂರ ಸಂಪರ್ಕ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಅರಣ್ಯ ಹಾಗೂ ಮೆಸ್ಕಾಂ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ ಸಮಸ್ಯೆಯಾಗದಂತೆ ಕಾರ್ಯನಿರ್ವಹಿಸಲು ಸೂಚಿಸಿದರು.
ಶೃಂಗೇರಿ ತಾಲೂಕಿನ 15,ಕೊಪ್ಪ ತಾಲೂಕಿನ 28,ಎನ್.ಆರ್ ಪುರ ತಾಲೂಕಿನ 14 ಟವರ್‌ಗಳಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ಒಂದು ವಾರದಲ್ಲಿ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.