Categories
ಚಿಕ್ಕಮಗಳೂರು

ಕಾಫಿ ನಾಡಲ್ಲಿ ಕುಮಾರಸ್ವಾಮಿ ವಾಸ್ತವ್ಯ: ಏನಿದು ಆಪರೇಷನ್?!

ಕಾಫಿ ನಾಡಲ್ಲಿ ಕುಮಾರಸ್ವಾಮಿ ವಾಸ್ತವ್ಯ: ಏನಿದು ಆಪರೇಷನ್?!
– ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಮಗಳ ಮದುವೆ
– ಕುಮಾರಸ್ವಾಮಿ ಸೇರಿ ಎಲ್ಲಾ ಜೆಡಿಎಸ್ ಶಾಸಕರು ಹಾಜರ್

NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರಿನ ರೆಸಾರ್ಟ್ನಲ್ಲಿ ಜೆಡಿಎಸ್ ಶಾಸಕರು ಮತ್ತು ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಆಗ ಮಹತ್ವದ ರಾಜಕೀಯ ಚರ್ಚೆ ನಡೆಯುವ ಸಾಧ್ಯತೆ ಇದೆ. ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಭೋಜೇಗೌಡ ಅವರ ಮಗಳ ಮದುವೆಯ ನಿಶ್ಚಿತಾರ್ಥ ಕಾರ್ಯಕ್ರಮ ನವೆಂಬರ್ 19 ರಂದು ನಿಗದಿಯಾಗಿದೆ. ಇದರಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ತಮ್ಮ ಪಕ್ಷದ ಶಾಸಕರನ್ನು ಕುಮಾರಸ್ವಾಮಿ ಚಿಕ್ಕಮಗಳೂರಿಗೆ ಕರೆದೊಯ್ಯುತ್ತಿದ್ದಾರೆ.
ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಮೂರು ದಿನಗಳ ಕಾಲ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಶಾಸಕರು ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 17 ಮಧ್ಯಾಹ್ನ ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ ಗೆ ಶಾಸಕರು ಆಗಮಿಸಲಿದ್ದಾರೆ. ನವೆಂಬರ್ 18 ರಂದು ಶಾಸಕ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ. ನ.19 ರಂದು ಸಿಲ್ವರ್ ಗೇಟ್ ರೆಸಾರ್ಟ್ ನಲ್ಲಿ ನಡೆಯುವ ಶಾಸಕ ಭೋಜೇಗೌಡ ಅವರ ಮಗಳ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಶಾಸಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಹೆಚ್.ಡಿ.ಕೆ ದತ್ತಮಾಲೆ ಧಾರಣೆ?!

ಬಿಜೆಪಿ ಜೊತೆ ದೋಸ್ತಿ ಮಾಡಿಕೊಂಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಹಿಂದುತ್ವದ ಅಜೆಂಡಾ ಕಡೆಗೆ ಮುಖ ಮಾಡಲಿದ್ದಾರೆ ಎನ್ನಲಾಗಿದೆ. ಮುಂದಿನ ಡಿಸೆಂಬರ್ ತಿಂಗಳಲ್ಲಿ ಹೆಚ್‌ಡಿಕೆ ದತ್ತಮಾಲೆ ಧಾರಣೆ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಹಿಂದುತ್ವದ ಕಡೆ ವಾಲಿರುವ ಜಾತ್ಯಾತೀತ ಜನತಾ ದಳ ಮತ್ತಷ್ಟು ಪ್ರಬಲ ಹಿಂದುತ್ವದ ಅಜೆಂಡಾ ಕಡೆ ಮುಖ ಮಾಡಲು ಮುಂದಾಗಿದೆ. ಮುಂದಿನ ಡಿಸೆಂಬರ್ ನಲ್ಲಿ ಕುಮಾರಸ್ವಾಮಿ ಅವರು ದತ್ತಮಾಲೆ ಸ್ವೀಕರಿಸುವ ಸಾಧ್ಯತೆ ಇದೆ. ಚಿಕ್ಕಮಗಳೂರು ಜೆಡಿಎಸ್ ಮುಖಂಡರ ಜೊತೆ ಈ ಕುರಿತು ಮಾಜಿ ಸಿಎಂ ಮಾತುಕತೆ ನಡೆಸಿದ್ದಾರೆ. ಅವಶ್ಯಕತೆ ಬಿದ್ದರೆ ದತ್ತಮಾಲೆ ಧಾರಣೆ ಮಾಡುವುದಾಗಿ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.