Categories
ಚಿಕ್ಕಮಗಳೂರು

ಬೈಕ್ ಸವಾರರ ಮೇಲೆ ಮೇಲೆ ಚಿರತೆ ದಾಳಿ

ಬೈಕ್ ಸವಾರರ ಮೇಲೆ ಮೇಲೆ ಚಿರತೆ ದಾಳಿ

* ಗಾಯಾಳುಗಳನ್ನು ರಕ್ಷಿಸಿದ ಸ್ಥಳೀಯರು,ಆಸ್ಪತ್ರೆಯಲ್ಲಿ ಚಿಕಿತ್ಸೆ
* ಜಿಲ್ಲೆಯಲ್ಲಿ ಕಾಡುಪ್ರಾಣಿ ಮಾನವ ಸಂಘರ್ಷ

NAMMMUR EXPRESS NEWS
ಕಡೂರು: ತಾಲೂಕಿನ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರ ಮೇಲೆ ಚಿರತೆ ದಾಳಿ ಮಾಡಿದೆ. ಸಖರಾಯಪಟ್ಟಣ ಸಮೀಪದ ಮದಗದ ಕೆರೆ ಬಳಿ ಘಟನೆ ನಡೆದಿದೆ. ಮೂರ್ತಣ್ಣ, ಮಂಜಣ್ಣ ಎಂಬಿಬ್ಬರ ಮೇಲೆ ಚಿರತೆ ದಾಳಿ ಮಾಡಿದೆ.
ಹಳ್ಳಿಯಿಂದ ಸಖರಾಯಪಟ್ಟಣಕ್ಕೆ ಬರುವಾಗ ಮಾರ್ಗ ಮಧ್ಯೆ ಘಟನೆ ನಡೆದಿದೆ. ಮೂರ್ತಣ್ಣನ ಎಡಗೈಯ ಒಂದು ಬೆರಳನ್ನು ಚಿರತೆ ತಿಂದಿದೆ. ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು. ರಸ್ತೆಯಲ್ಲಿ ಸಂಚರಿಸುವಾಗ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ.
ಇತ್ತೀಚಿಗೆ ಕಾಡು ಪ್ರಾಣಿಗಳಿಂದ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಳಿಗೆ ಜನ ಜೀವ ತೆರುತ್ತಿರುವ ಬೆನ್ನಲ್ಲೇ ಇದೀಗ ಚಿರತೆ ದಾಳಿಯೂ ಶುರುವಾಗಿದೆ.
ಅದರಲ್ಲೂ ಮಲೆನಾಡು ಭಾಗದಲ್ಲಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ರೈತರ ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದು,ಕೃಷಿ ಕೆಲಸದಲ್ಲಿ ನಿರತರಾಗಿರುವ ರೈತ ಕೂಲಿ ಕಾರ್ಮಿಕರ ಮೇಲೆ ದಾಳಿ ನಡೆಸುತ್ತಿವೆ. ಇದರಿಂದ ರೈತರು ಹಾಗೂ ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಕಳೆದ ವಾರ ಕಾಡಾನೆ ದಾಳಿಗೆ ಬಾಳೆಹೊನ್ನೂರು ಭಾಗದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದರು. ಇದರಿಂದ ಎಚ್ಚೆತ್ತ ಇಲಾಖೆ ದಾಳಿ ಮಾಡಿದ್ದ ಕಾಡಾನೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಾಡುಪ್ರಾಣಿ ಮಾನವ ಸಂಘರ್ಷಗಳು ಹೆಚ್ಚುತ್ತಿದ್ದು ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೇಂದು ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.