ಶೃಂಗೇರಿ ಸಮೀಪ ಚಿರತೆ ಪ್ರತ್ಯಕ್ಷ!
– ಮಲೆನಾಡಲ್ಲಿ ಕಾಡು ಪ್ರಾಣಿಗಳ ಹಾವಳಿ: ಆತಂಕದಲ್ಲಿ ಗ್ರಾಮಸ್ಥರು
– ಕೊಪ್ಪದಲ್ಲಿ ಮಹಿಳೆ ಆತ್ಮಹತ್ಯೆ: ಕಾರಣ ಏನು…?
NAMMUR EXPRESS NEWS
ಶೃಂಗೇರಿ: ಶೃಂಗೇರಿ ತಾಲೂಕಿನ ಕುಂಚೇಬೈಲು ಸಮೀಪ ಮುಂಡಗೋಡುವಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಶೃಂಗೇರಿಯಿಂದ ಅಂಗಡಿ ಕೆಲಸ ಮುಗಿಸಿ ಮನೆಗೆ ಬೈಕ್ನಲ್ಲಿ ಹಿಂತಿರುಗುವಾಗ ರಾತ್ರಿ 10 ಗಂಟೆ ಸುಮಾರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆಕಂಡು ಗಾಬರಿಗೊಂಡ ಬೈಕ್ ಸವಾರ ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ. ಗ್ರಾಮಸ್ಥರಿಗೆ ಎಚ್ಚರಿಕೆಯಿಂದಿರಲು ತಿಳಿಸಲಾಗಿದೆ.
ಹಲವು ದಿನಗಳಿಂದ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಜಾಸ್ತಿಯಾಗಿದೆ. ಕಾಡುಕೋಣ,ಕಾಡಾನೆ,ಕರಡಿ,ಚಿರತೆಯಂತಹ ಪ್ರಾಣಿಗಳ ಹಾವಳಿ ಮಲೆನಾಡಿಗರಲ್ಲಿ ಆತಂಕ ಸೃಷ್ಠಿಸಿದೆ. ಪ್ರಾಣಿಗಳ ಹಾವಳಿಯಿಂದ ರೈತರ ಬೆಳೆ ನಾಶವಾಗುತ್ತಿದ್ದು ರೈತರು ಆತಂಕಕ್ಕೀಡಾಗಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಂಡು ಕಾಡು ಪ್ರಾಣಿಗಳ ಹಾವಳಿಯಿಂದ ಸಾರ್ವಜನಿಕರು ಹಾಗು ರೈತರ ಬೆಳೆಯನ್ನು ರಕ್ಷಿಸುವ ಕಾರ್ಯ ಮಾಡುವಂತೆ ಮಲೆನಾಡಿಗರು ಒತ್ತಾಯಿಸಿದ್ದಾರೆ.
ಕೊಪ್ಪದಲ್ಲಿ ಮಹಿಳೆ ಆತ್ಮಹತ್ಯೆ!
ಕೊಪ್ಪ: ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪ ತಾಲೂಕಿನ ಹೆಗ್ಗಾರು ಗ್ರಾಮದಲ್ಲಿ ನಡೆದಿದೆ. ಹೆಗ್ಗಾರು ಗ್ರಾಮದ ಹುಲುತಾಳುವಿನ ಕೃಷ್ಣಗೌಡ ಅವರ ಪತ್ನಿ ಸುಶೀಲ (55) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಆದರೆ, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ.