ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ
* ಕಳಸ ಖಾಸಗಿ ಆಸ್ಪತ್ರೆಯ ನರ್ಸ್‌ಗೆ ಕೊಪ್ಪ ತಾಲೂಕಿನ ಗುಡ್ಡೇತೋಟದ ಯುವಕನಿಂದ ಹಲ್ಲೆ
* ಪೊಲೀಸರ ಮಿಂಚಿನ ಕಾರ್ಯಾಚರಣೆ,ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
NAMMMUR EXPRESS NEWS
ಕಳಸ: ತಾಲೂಕಿನ ಮಹಾವೀರ ಸರ್ಕಲ್ ಬಳಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಪಾಗಲ್ ಪ್ರೇಮಿಯಿಂದ ಚಾಕು ಇರಿದ ಘಟನೆ ನಡೆದಿದೆ. ಕಳಸದ ಖಾನಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕಾವ್ಯ (24) ಹಲ್ಲೆಗೊಳಗಾದ ಯುವತಿಯಾಗಿದ್ದು, ಕೊಪ್ಪ ತಾಲೂಕಿನ ಗುಡ್ಡೇತೋಟ ಮೂಲದ ಯುವಕ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನು. ಆದರೆ ನಿನ್ನೆ ಭೇಟಿಯಾಗಿ ಪ್ರೀತಿಸುವಂತೆ ಒತ್ತಾಯಿಸಿದಾಗ ಯುವತಿ ನಿರಾಕರಿಸಿದ್ದಾಳೆ ಈ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿ ಯುವತಿ ಕಾವ್ಯಾಳಿಗೆ ಕಲ್ಲಿನಿಂದ ತಲೆಗೆ ಹೊಡೆದು,ಬಳಿಕ ತಲೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗಾಗಿ ಅಲರ್ಟ್ ಆದ ಕಳಸ,ಜಯಪುರ,ಕೊಪ್ಪ ಪೊಲೀಸರು ಯುವಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.