Categories
ಚಿಕ್ಕಮಗಳೂರು

ತೋಟದಲ್ಲಿ ಬಿದ್ದ ತೆಂಗಿನಕಾಯಿ ತೆಗೆದುಕೊಂಡಿದ್ದಕ್ಕೆ ಹಲ್ಲೆ, ವ್ಯಕ್ತಿ ಸಾವು

ತೋಟದಲ್ಲಿ ಬಿದ್ದ ತೆಂಗಿನಕಾಯಿ ತೆಗೆದುಕೊಂಡಿದ್ದಕ್ಕೆ ಹಲ್ಲೆ, ವ್ಯಕ್ತಿ ಸಾವು

* ಹಿಂದೆಯೂ ಹಲವು ಬಾರಿ ತೆಂಗಿನಕಾಯಿ ಕೊಂಡೊಯ್ಯದಂತೆ ಎಚ್ಚರಿಕೆ
* ಪ್ರಕರಣ ದಾಖಲಿಸಲು ವಿಳಂಬ ಪೊಲೀಸರ ಮೇಲೆ ಆರೋಪ

NAMMMUR EXPRESS NEWS
ಕಡೂರು: ತೋಟದಲ್ಲಿ ಬಿದ್ದ ತೆಂಗಿನಕಾಯಿಯನ್ನು ತೆಗೆದುಕೊಂಡಿದ್ದಕ್ಕೆ ತೋಟದ ಮಾಲೀಕನೊಬ್ಬ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿ ಕುಮಾರ್ (37) ಎಂದು ಗುರುತಿಸಲಾಗಿದೆ.

* ಅಷ್ಟಕ್ಕೂ ನಡೆದದ್ದೇನು ?
ಗೊಲ್ಲರಹಟ್ಟಿ ಗ್ರಾಮದ ನಿವಾಸಿ
ಕುಮಾರ್ ಪ್ರತಿನಿತ್ಯ ಹೊಲಕ್ಕೆ ಹೋಗುವ ದಾರಿಯಲ್ಲಿದ್ದ ಮಧು (37) ಎನ್ನುವವರ ಅವರ ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ಹಿಂದೆ ಕೂಡ ಹಲವು ಬಾರಿ ಕುಮಾರ್‌ಗೆ ಎಚ್ಚರಿಕೆ ನೀಡಿದ್ದ ಮಧು, ನಿನ್ನೆ ಮತ್ತೊಮ್ಮೆ ಇದೇ ವಿಷಯಕ್ಕೆ ಕುಮಾರ್‌ಗೆ ಬುದ್ಧಿ ಹೇಳಿದ್ದಾರೆ. ಈ ವೇಳೆ, ಕುಮಾರ್ ಮಧುವಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಮಧು, ಕುಮಾರ್‌ ಮೇಲೆ ಗುದ್ದಲಿಯಿಂದ ಹಲ್ಲೆ ಮಾಡಿದ್ದಾನೆ.
ತೀವ್ರವಾಗಿ ಗಾಯಗೊಂಡ ಕುಮಾರ್ ರಕ್ತಸ್ರಾವದಿಂದ ನಿತ್ರಾಣಗೊಂಡು ಅಲ್ಲೇ ಬಿದ್ದಿದ್ದನು. ನಂತರ, ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಘಟನೆ ನಡೆದಾಗ ಕುಮಾರ್ ಮದ್ಯ ಸೇವಿಸಿ ಊಟ-ತಿಂಡಿ ಮಾಡಿರಲಿಲ್ಲ ಎಂದು ತಿಳಿದುಬಂದಿದೆ. ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಕೊಲೆ ಆರೋಪಿ ಮಧುವನ್ನು ಬಂಧಿಸಿದ್ದಾರೆ. ಸಣ್ಣ ವಿಷಯಕ್ಕೆ ನಡೆದ ಈ ಕೃತ್ಯ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.

* ಪ್ರಕರಣ ದಾಖಲಿಸಲು ವಿಳಂಬ ಪೊಲೀಸರ ವಿರುದ್ಧ ಆರೋಪ
ಇನ್ನು ಕೇಸ್ ಮಾಡಲು ವಿಳಂಬ ಆರೋಪಿಸಿ ಸಖರಾಯಪಟ್ಟಣ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ಕಠಿಣ ಕ್ರಮಕ್ಕೆ ಮೃತನ ಕುಟುಂಬಸ್ಥರು ಮತ್ತು ಸ್ಥಳೀಯರು ಆಗ್ರಹಿಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್​​ಪಿ ಸಿ.ಟಿ‌ ಜಯಕುಮಾರ್ ಭೇಟಿ ನೀಡಿದರು. ಮಾರಣಾಂತಿಕ ಹಲ್ಲೆ ಮಾಡಿರುವ ಬಗ್ಗೆ ದೂರು ನೀಡಿದರೂ ಸಾವನ್ನಪ್ಪಿದ‌ ಬಳಿಕ ಪ್ರಕರಣ ದಾಖಲಿಸಿದ್ದಾರೆ ಆರೋಪ ಮಾಡಿದರು. ಈ ವೇಳೆ ಸಖರಾಯಪಟ್ಟಣ ಠಾಣೆ ಪಿಎಸ್​​ಐ ಪವನ್ ವಿರುದ್ಧ ತನಿಖೆ ನಡೆಸುವುದಾಗಿ ಎಎಸ್​​ಪಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.