ಟಾಪ್ 4 ನ್ಯೂಸ್ ಚಿಕ್ಕಮಗಳೂರು
ಚಿಕ್ಕಮಗಳೂರು: ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ವರದಕ್ಷಿಣೆ ಕಿರುಕುಳ ದೂರು
– ಗೋಣಿಕೊಪ್ಪಲು : ಕಾಫಿತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ
– ಕಡಬಗೆರೆ: ಕಾಂಗ್ರೆಸ್ ಅಧ್ಯಕ್ಷೆ ಅವರ ಮನೆ ಮೇಲೆ ಮೆಸ್ಕಾಂ ಅಧಿಕಾರಿಗಳ ದಾಳಿ
– ಎನ್. ಆರ್. ಪುರ: ಬಾರಿ ಮಳೆಯಿಂದ ರಸ್ತೆ ಮುಳುಗಡೆ
NAMMUR EXPRESS NEWS
ಚಿಕ್ಕಮಗಳೂರು: ಗೃಹಿಣಿ ಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಚಂದುಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಭಿಕ್ಷಾ (25) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ. ನಾಲ್ಕು ವರ್ಷದ ಹಿಂದೆ ಚಂದುವಳ್ಳಿಯ ಪ್ರವೀಣ್ ಎಂಬುವವರ ಜೊತೆ ಸುಭಿಕ್ಷಾ ವಿವಾಹವಾಗಿದ್ದರು. ಮೃತರಿಗೆ ಎರಡುವರೆ ವರ್ಷದ ಗಂಡು ಮಗು ಇದ್ದು ಇದೀಗ ಸುಭಿಕ್ಷಾ ಕುಟುಂಬದವರು ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಬಿಎನ್ಎಸ್ ಕಾಯ್ದೆಯ ಪ್ರಕಾರ ತಹಶೀಲ್ದಾರ್ ಸ್ಥಳ ಮಹಜರ್ ಮಾಡಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಕುಿತ ಪ್ರಕರಣ ದಾಖಲಾಗಿದೆ.
– ಗೋಣಿಕೊಪ್ಪಲು : ಕಾಫಿತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ
ಗೋಣಿಕೊಪ್ಪಲು: ಕಾಫಿ ತೋಟವೊಂದರಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕೊಡಗು ಜಿಲ್ಲೆ ಗೋಣಿಕೊಪ್ಪಲು ಸಮೀಪದ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಗೋಣಿಕೊಪ್ಪಲು ಸಮೀಪದ ಕಳತ್ಮಾಡು ಗ್ರಾಮದ ತೋಟವೊಂದರಲ್ಲಿ ಕಾಡಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 30-35 ವರ್ಷ ವಯಸ್ಸಿನ ಗಂಡು ಕಾಡಾನೆ ಎಂದು ಅಂದಾಜಿಸಲಾಗಿದೆ. ಮೇಲ್ನೋಟಕ್ಕೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾಡಾನೆ ಕಳೆಬರ ಪತ್ತೆಯಾಗಿದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಕೊಡಗು ಡಿಸಿಎಫ್ ಜಗನ್ನಾಥ್ ತಿಳಿಸಿದ್ದಾರೆ.
– ಕಡಬಗೆರೆ: ಕಾಂಗ್ರೆಸ್ ಅಧ್ಯಕ್ಷೆ ಅವರ ಮನೆ ಮೇಲೆ ಮೆಸ್ಕಾಂ ಅಧಿಕಾರಿಗಳ ದಾಳಿ
ಕಡಬಗೆರೆ: ಕಾಂಗ್ರೆಸ್ ನಾಯಕಿ ಮನೆಯಲ್ಲೇ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿರೋ ಪ್ರಕರಣ ಬೆಳಕಿಗೆ ಬಂದಿದೆ. ಎನ್. ಆರ್. ಪುರ ತಾಲ್ಲೂಕಿನ ಮಹಿಳಾ ಮೋರ್ಚಾ ಅಧ್ಯಕ್ಷೆ ಆಶಾ ನಾರಾಯಣ್ ಸುಮಾರು ಮೂರು ಮನೆಗಳಿಗೆ ಅಕ್ರಮವಾಗಿ ವಿದ್ಯುತ್ ಹಾಕಿಸಿಕೊಂಡಿರುವ ಆರೋಪದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಶಾ ನಾರಾಯಣ್ ಕಾಂಗ್ರೆಸ್ ಎನ್ ಆರ್ ಪುರ ತಾಲ್ಲೂಕಿನ ಮಹಿಳಾ ಮೋರ್ಚಾ ಅಧ್ಯಕ್ಷೆ ಹಾಗೂ ದೇವದಾನ ಗ್ರಾಮ ಪಂಚಾಯತಿಯ ಸದಸ್ಯೆ ಆಗಿದ್ದು, ಮೆಸ್ಕಾಂ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
– ಎನ್. ಆರ್. ಪುರ: ಬಾರಿ ಮಳೆಯಿಂದ ರಸ್ತೆ ಮುಳುಗಡೆ
ಎನ್. ಆರ್. ಪುರ: ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು, ಎನ್. ಆರ್. ಪುರ ತಾಲೂಕಿನ ಬನ್ನೂರು ಬಳಿ ರಸ್ತೆ ಮುಳುಗಡೆಯಾಗಿದೆ. ಕೆಲವು ದಿನಗಳ ಕಾಲ ಬಿಡುವು ನೀಡಿದ ಮಳೆರಾಯ ಮತ್ತೆ ಅಬ್ಬರಿಸಿದ್ದು, ಪರಿಣಾಮ ಬಾಳೆಹೊನ್ನೂರು, ಕಳಸ, ಕೊಟ್ಟಿಗೆಹಾರ ಸಂಪರ್ಕ ಕಡಿತವಾಗಿದೆ. ರಸ್ತೆಯ ಮೇಲೆ ರಭಸವಾಗಿ ನೀರು ಹರಿಯುತ್ತಿರುವ ಕಾರಣ ರಸ್ತೆ ಸಂಪರ್ಕ ಕಡಿತವಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು, ಪ್ರವಾಸಿಗರು ಪರದಾಡುವ ಸ್ಥಿತಿ ನಿಮಾರ್ಣವಾಗಿದೆ.