ಕೊಪ್ಪದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜನೆ
* ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನದ ಪ್ರಯುಕ್ತ ಶಿಬಿರ
* ಕೊಪ್ಪದ ಸಂಘ,ಸಂಸ್ಥೆಗಳಿಂದ ಆಯೋಜನೆಗೊಂಡ ಶಿಬಿರ,ಬನ್ನಿ ರಕ್ತದಾನ ಮಾಡಿ
NAMMMUR EXPRESS NEWS
ಕೊಪ್ಪ: ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನದ ಪ್ರಯುಕ್ತ ಕೊಪ್ಪದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಸೆ.7 ರ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಪಟ್ಟಣದ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಎನ್ ಕೆ ರಸ್ತೆ,ಹುಲಮಕ್ಕಿಯಲ್ಲಿ ಆಯೋಜಿಸಲಾಗಿದೆ.
ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕೊಪ್ಪ,ಲೋಕ ಸೇವಾನಿರತ ಎಂ ಎಸ್ ದ್ಯಾವೇಗೌಡ ಸ್ಮಾರಕ ಸಾರ್ವಜನಿಕ ಆಸ್ಪತ್ರೆ ಕೊಪ್ಪ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಕೊಪ್ಪ,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕೊಪ್ಪ,ಜಿಲ್ಲಾ ರಕ್ತ ನಿಧಿ ಚಿಕ್ಕಮಗಳೂರು ಹಾಗೂ ಕೊಪ್ಪ ತೋಲೂಕಿನ ಆಸಕ್ತ ಸಾರ್ವಜನಿಕರ ಸಹಯೋಗದಲ್ಲಿ ಈ ರಕ್ತದಾನ ಶಿಬಿರ ನಡೆಯಲಿದ್ದು ಆಸಕ್ತರು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಯೋಜಕರು ಕೋರಿದ್ದಾರೆ.
