ಬೀದಿ ನಾಯಿ ಜೊತೆ ಅಸಭ್ಯ ವರ್ತನೆ: ಬಿತ್ತು ಕೇಸ್!
– ಬೀದಿ ನಾಯಿಯನ್ನೂ ಬಿಡದ ಕಾಮುಕ!
– ಲೈಂಗಿಕ ಕ್ರಿಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
NAMMUR EXPRESS NEWS
ಚಿಕ್ಕಮಗಳೂರು: ಯುವಕನೊಬ್ಬ ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಲೈಂಗಿಕ ಕ್ರಿಯೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು ಆತನ ವಿರುದ್ಧ ಚಿಕ್ಕಮಗಳೂರಿನ ಕೊಪ್ಪದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೀದಿ ನಾಯಿಗಳ ಜೊತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವುದು ಸಿಸಿ ಕ್ಯಾಮರಾ ದೃಶ್ಯದಲ್ಲಿ ಕಂಡುಬಂದಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಸ್ವಯಂಪ್ರೇರಿತವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ನೀಡಿದ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 9ರಂದು ಕೃತ್ಯದ ಬಗ್ಗೆ ವಿಡಿಯೋ ಬೆಳಕಿಗೆ ಬಂದಿದ್ದು, ಸಿಸಿಟಿವಿ ದೃಶ್ಯದ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸ್ ಕಾನ್ಸ್ಟೇಬಲ್ದೂರು ನೀಡಿದ್ದಾರೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ. ಮಾಹಿತಿಯ ಪ್ರಕಾರ, ವ್ಯಕ್ತಿಯೊಬ್ಬ ನಾಯಿಯನ್ನು ಹಿಡಿದುಕೊಂಡು ಅದರೊಂದಿಗೆ ಅಸಭ್ಯವರ್ತಿಸುತ್ತಿದ್ದಾನೆ. ಬೀದಿ ನಾಯಿಗೆ ಉಪದ್ರವ ಮಾಡುವುದರ ಜೊತೆಗೆ ಪ್ರಾಣಿ ಹಿಂಸೆ ಮಾಡಿರುವುದು ನಿಲ್ದಾಣದಲ್ಲಿರುವ ಜಯಪುರ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಬಗ್ಗೆ ದೊರೆತ ಮಾಹಿತಿ ಮೇರೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಜಯಪುರ ಎಂಟರ್ ಪ್ರೈಸಸ್ ಮಾಲೀಕರ ಮೊಬೈಲ್ನಿಂದ ಪಡೆದು ಪರಿಶೀಲಿಸಿದ್ದಾರೆ ಎಂದು ಪೊಲೀಸ್ ಕಾನ್ಸ್ಟೇಬಲ್ ತಿಳಿಸಿದ್ದಾರೆ.