Categories
ಚಿಕ್ಕಮಗಳೂರು

ಕಾರ್ಮಿಕರಿಗೆ ಕಿಟ್ ವಿತರಿಸಿದ ಶಾಸಕ ಟಿ.ಡಿ ರಾಜೇಗೌಡ

ಕಾರ್ಮಿಕರಿಗೆ ಕಿಟ್ ವಿತರಿಸಿದ ಶಾಸಕ ಟಿ.ಡಿ ರಾಜೇಗೌಡ
– ಕ್ಷೇತ್ರದ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ
– ಕೊಪ್ಪ ಸರ್ಕಾರಿ ನೌಕರರ ಸಂಘದ ಕಟ್ಟಡದ ಶಂಕುಸ್ಥಾಪನೆ

NAMMUR EXPRESS NEWS
ಎನ್ ಆರ್ ಪುರ/ಕೊಪ್ಪ: ಕೊಪ್ಪ, ಶೃಂಗೇರಿ, ಎನ್ ಆರ್ ಪುರ ತಾಲೂಕಿನ ಕಾರ್ಮಿಕ ಫಲಾನುಭವಿಗಳಿಗೆ ಮತ್ತು ಕಟ್ಟಡ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ಹಾಗೂ ನ್ಯೂಟ್ರೀಷಿಯನ್ ಕಿಟ್‌ಗಳನ್ನು ಶಾಸಕ ಟಿ.ಡಿ ರಾಜೇಗೌಡ ವಿತರಿಸಿದರು. ನಂತರ ತಾಲೂಕಿನ ಶಾಸಕರ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಕೊಪ್ಪ ಶಾಸಕರ ಕಛೇರಿ ಸಮರ್ಪಣಾದಲ್ಲಿ ಕ್ಷೇತ್ರದ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ರಾಜೇಗೌಡ ನಂತರ ಕೊಪ್ಪ ತಾಲೂಕಿನ ಸರ್ಕಾರಿ ನೌಕರರ ಸಂಘದ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.