Categories
ಚಿಕ್ಕಮಗಳೂರು

ಸಂಸದರ ಶೃಂಗೇರಿ ಅಭಿವೃದ್ಧಿ ರೌಂಡ್ಸ್!

ಸಂಸದರ ಶೃಂಗೇರಿ ಅಭಿವೃದ್ಧಿ ರೌಂಡ್ಸ್!

– ಕೆರೆಕಟ್ಟೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ 

– ಶೃಂಗೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

NAMMUR EXPRESS NEWS 

ಶೃಂಗೇರಿ: ಶೃಂಗೇರಿ ತಾಲೂಕಿನಲ್ಲಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರು ಪ್ರವಾಸ ಕೈಗೊಂಡು ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿ ಸಮಸ್ಯೆ ಬಗ್ಗೆ ಸಾರ್ವಜನಿಕರು ಮತ್ತು ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ನಂತರ ಶೃಂಗೇರಿಗೆ ಆಗಮಿಸಿದ ಸಂಸದರು ಪಟ್ಟಣ ಪಂಚಾಯ್ತಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿ ಅಹವಾಲು ಸ್ವೀಕರಿಸಿದರು.

ಶ್ರೀನಿವಾಸ ಪೂಜಾರಿ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸರ್ಕಾರದೊಂದಿಗೆ ಹಾಗೂ ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡೋದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ.ಎನ್ ಜೀವರಾಜ್,ಶೃಂಗೇರಿ ಬಿಜೆಪಿ ತಾಲೂಕು ಅಧ್ಯಕ್ಷ ಉಮೇಶ್ ತಲಗಾರ್,ಪಟ್ಟಣ ಪಂಚಾಯ್ತಿ ಅಧ್ಯಕ್ಷ ವೇಣುಗಪಾಲ್,ಉಾ್ಯಕ್ಷ ಎಂ ಎಲ್ ಪ್ರಕಾಶ್, ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಹರೀಶ್ ವಿ‌ ಶೆಟ್ಟಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನೂತನ್ ಕುಮಾರ್ ಕಿಗ್ಗಾ,ಪಟ್ಟಣ ಪಂಚಾಯ್ತಿ ಚುನಾಯಿತ ಸದಸ್ಯರು ಹಾಜರಿದ್ದರು.

ನಂತರ ಶೃಂಗೇರಿ ಹೆಬ್ಬಾಗಿಲು ಶ್ರೀವೆಂಕಣರಮಣ ಸ್ವಾಮಿ ದೇವಾಲಯದಲ್ಲಿ ಶ್ರೀಅನಂತ ಹುಣ್ಣಿಮೆ ಪ್ರಯುಕ್ತ ಏರ್ಪಡಿಸಿದ್ದ ವಿಶೇಷ ಪೂಜಾಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಈ ವಿಶೇಷ ಸಂದರ್ಭದಲ್ಲಿ ತಾಲೂಕಿನ ಜಿಎಸ್‌ಬಿ ಸಮುದಾಯ ಬಾಂಧವರಿಂದ ವಿಶೇಷ ಪೂಜೆ ಸಲ್ಲಿಸಿ ಪ್ರಸಾದವನ್ನು ಶ್ರೀನಿವಾಸ ಪೂಜಾರಿಯವರಿಗೆ ನೀಡಿದರು ಹಾಗೂ ಸಮುದಾಯದ ವತಿಯಿಂದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ,ಮಾಜಿ ಶಾಸಕ ಡಿ.ಎನ್ ಜೀವರಾಜ್,ಪಟ್ಟಣ ಪಂಚಾಯ್ತಿ ನೂತನ ಅಧ್ಯಕ್ಷ ವೇಣುಗೋಪಾಲ್‌ರವರುಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಹೆಗ್ಗದ್ದೆ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದರು ಅನಂತ ಹುಣ್ಣಿಮೆ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.